SHOCKING : ರಾಜ್ಯದಲ್ಲಿ ‘ಪೈಶಾಚಿಕ ಕೃತ್ಯ’ : ಭಟ್ಕಳದಲ್ಲಿ  ಗೋವುಗಳ ನರಮೇಧ ಶಂಕೆ, ಸಾವಿರಾರು ಹಸುಗಳ ಎಲುಬುಗಳು ಪತ್ತೆ.!


ಭಟ್ಕಳ : ರಾಜ್ಯದಲ್ಲಿ ‘ಪೈಶಾಚಿಕ ಕೃತ್ಯ’  ನಡೆದಿದ್ದು, ಭಟ್ಕಳದಲ್ಲಿ  ಗೋವುಗಳ ನರಮೇಧ ಶಂಕೆ ವ್ಯಕ್ತವಾಗಿದ್ದು, ಸಾವಿರಾರು ಹಸುಗಳ ಎಲುಬುಗಳು ಪತ್ತೆಯಾಗಿದೆ.

ಉತ್ತರ ಕರ್ನಾಟಕ ಜಿಲ್ಲೆಯ ಭಟ್ಕಳ ಪಟ್ಟಣದ ಮುಗ್ಗುಮ್ ಕಾಲನಿಯ ಗುಡ್ಡದ ಅರಣ್ಯ ಇಲಾ ಖೆಗೆ ಸೇರಿದ ಜಾಗದಲ್ಲಿ ಹಲವು ಜಾನುವಾರುಗಳ ಮೂಳೆಗಳು, ಅಸ್ಥಿಪಂಜರಗಳು ಪತ್ತೆ ಆಗಿವೆ. ಇದರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಹಿಂದೂ ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ.

ಈ ಸ್ಥಳದಲ್ಲಿ ಹಲವು ದಿನಗಳಿಂದ ಜಾನುವಾರು ಹತ್ಯೆ ನಡೆಯುತ್ತಿದೆ ಎಂದು ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಕ್ರಮವಾಗಿ ಗೋವುಗಳನ್ನು ಭಟ್ಕಳಕ್ಕೆ ತಂದು ಹತ್ಯೆ ಮಾಡಲಾಗುತ್ತಿದೆ. ಕೂಡಲೇ ಪೊಲೀಸರು ಈ ಬಗ್ಗೆ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಬೇಕು ಎಂದು ಹಿಂದೂ ಕಾರ್ಯಕರ್ತರು ಆಗ್ರಹಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read