HomeCrimeBIG News: ಹುಣಸೂರು ಜ್ಯುವೆಲ್ಲರಿ ಶಾಪ್ ದರೋಡೆ, ಇಬ್ಬರ ಬಂಧನ

BIG News: ಹುಣಸೂರು ಜ್ಯುವೆಲ್ಲರಿ ಶಾಪ್ ದರೋಡೆ, ಇಬ್ಬರ ಬಂಧನ

ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಹುಣಸೂರು ಬಸ್ ನಿಲ್ದಾಣದ ಹಿಂಭಾಗದಲ್ಲಿ ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ಚಿನ್ನಂಗಡಿ ದರೋಡೆ ಪ್ರಕರಣದ ಅಪ್‌ಡೇಟ್ ಸಿಕ್ಕಿದೆ. 5ಕ್ಕೂ ಹೆಚ್ಚು ಜನರ ಗ್ಯಾಂಗ್‌ ಅಂಗಡಿಗೆ ನುಗ್ಗಿ, ಸಿಬ್ಬಂದಿಗೆ ಗನ್ ತೋರಿಸಿ 4 ರಿಂದ 5 ಕೋಟಿ ರೂ. ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನು ಡಿಸೆಂಬರ್ 28, 2025ರಂದು ದರೋಡೆ ಮಾಡಿ ಪರಾರಿಯಾಗಿತ್ತು.

ಈಗ ಹುಣಸೂರು ಪಟ್ಟಣದ ಚಿನ್ನದ ಅಂಗಡಿಯಲ್ಲಿ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ದರೋಡೆಕೋರರನ್ನು ಬಂಧಿಸಲಾಗಿದೆ ಎಂದು ಮೈಸೂರು ಎಸ್‌ಪಿ ಹೇಳಿದ್ದಾರೆ. ತನಿಖೆ ಪ್ರಗತಿಯಲ್ಲಿರುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಹುಣಸೂರು ಪಟ್ಟಣದ ಚಿನ್ನದಂಗಡಿಯಲ್ಲಿ ದರೋಡೆ ಮಾಡಿದ್ದ ಇಬ್ಬರು ದರೋಡೆಕೋರರ ಬಂಧಿಸಲಾಗಿದೆ. ಮೈಸೂರು ಜಿಲ್ಲಾ ಪೊಲೀಸ್ ವ್ಯಾಪ್ತಿಯ ಹುಣಸೂರು ಪಟ್ಟಣದಲ್ಲಿನ ಸೈ ಗೋಲ್ಡ್ ಅಂಡ್ ಡೈಮಂಡ್ ಶಾಪ್ ಅಂಗಡಿಗೆ ದಿನಾಂಕ 28.12.2025ರಂದು ಮಧ್ಯಾಹ್ನ 2.04 ಗಂಟೆ ಸಮಯದಲ್ಲಿ 5 ಜನ ವ್ಯಕ್ತಿಗಳು ಮುಖಕ್ಕೆ ಮಾಸ್ಕ್‌ ಹಾಗೂ ಹೆಲೈಟ್ ಹಾಕಿಕೊಂಡು ಆಗಮಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೈಗಳಲ್ಲಿ ಪಿಸ್ತೂಲ್ ಹಿಡಿದು ಚಿನ್ನದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದವರಿಗೆ ಹೆದರಿಸಿ ಅಂಗಡಿಯಲ್ಲಿದ್ದ 450 ವಿವಿಧ ಮಾದರಿಯ 8034 ಗ್ರಾಂ 200 ಮಿಲಿ ತೂಕವಿರುವ ಅಂದಾಜು 10 ಕೋಟಿ ರೂ ಮೌಲ್ಯದ ಚಿನ್ನಾಭರಣಗಳನ್ನು ದೋಚಿಕೊಂಡು ಹೋಗಿದ್ದರು.

ದೂರಿನ ಅನ್ವಯ ಹುಣಸೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು. ಡಾ.ಎಂ.ಚಿ.ಬೋರಲಿಂಗಯ್ಯ ಪೊಲೀಸ್ ಮಹಾನಿರೀಕ್ಷಕರು, ದಕ್ಷಿಣ ವಲಯ, ಮೈಸೂರು ಅವರ ಮಾರ್ಗದರ್ಶನದಲ್ಲಿ ಕಾರ್ಯಪ್ರವೃತ್ತರಾದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಪ್ರಕರಣದಲ್ಲಿ ಆರೋಪಿಗಳು ಮತ್ತು ಮಾಲು ಪತ್ತೆಗಾಗಿ ಪೊಲೀಸ್ ಅಧೀಕ್ಷಕ ಮಲ್ಲಕಾರ್ಜುನ ಬಾಲದಂಡಿ, ಅಪರ ಪೊಲೀಸ್ ಅಧೀಕ್ಷಕ ಎಲ್.ನಾಗೇಶ್ ಅವರ ನೇತೃತ್ವದಲ್ಲಿ 5 ತಂಡಗಳನ್ನು ರಚಿಸಿ, ವಿವಿಧ ರಾಜ್ಯಗಳಿಗೆ ಕಳುಹಿಸಿಕೊಡಲಾಗಿತ್ತು.

ಬಿಹಾರ ರಾಜ್ಯಕ್ಕೆ ತೆರಳಿದ್ದ ಪೊಲೀಸ್ ನಿರೀಕ್ಷಕ ಸಂತೋಷ್ ಕಶ್ಯಪ್, ಟಿ.ಎಂ.ಪುನೀತ್, ಪಿಎಸ್‌ಐ ಅಜಯ್ ಕುಮಾರ್ ಅವರ ನೇತೃತ್ವದ ತಂಡವು ಬಿಹಾರ ರಾಜ್ಯದ ಪೊಲೀಸರ ಸಹಕಾರದೊಂದಿಗೆ ಆರೋಪಿಗಳನ್ನು ಬಂಧಿಸಿದೆ.

ಆರೋಪಿಗಳನ್ನು ದೆಹಲಿಯ ರಿಷಿಕೇಶ್ ಕುಮಾರ್ ಸಿಂಗ್ ಬಿನ್ ವಿಜಯಕುಮಾರ್ ಸಿಂಗ್, ಹಾಗೂ ಬಿಹಾರದ ಪಂಕಜ್ ಕುಮಾರ್ ಬಿನ್ ರಾಮನಾಥ್ ಪ್ರಸಾದ್ ಸಿಂಗ್ ಎಂದು ಗುರುತಿಸಲಾಗಿದೆ. ಇಬ್ಬರನ್ನು ದರ್ಬಾಂಗ್ ಜಿಲ್ಲೆಯಲ್ಲಿ ದಸ್ತಗಿರಿ ಮಾಡಲಾಗಿದ್ದು ದರೋಡೆ ಮಾಡಿದ್ದ 12.5 ಗ್ರಾಂ ತೂಕದ ಚಿನ್ನದ ಆಭರಣಗಳು, 92,000 ರೂಪಾಯಿ ನಗದು ಹಣ, ಸೈ ಗೋಲ್ಡ್ ಎಂಬ ಚಿಹ್ನೆ ಇರುವ ಒಂದು ಬಾಕ್ಸ್ ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ರಾಯಲ್ ಎನ್‌ಫೀಲ್ಡ್ ಬೈಕ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕೃತ್ಯದಲ್ಲಿ ಭಾಗಿಯಾಗಿದ್ದ ಉಳಿದ ಆರೋಪಿಗಳು ಹಾಗೂ ಮಾಲು ಪತ್ತೆಯಾಗಬೇಕಿದ್ದು, ಪತ್ತೆ ಕಾರ್ಯ ಮುಂದುವರೆದಿರುತ್ತದೆ.

ತನಿಖಾ ಕಾರ್ಯದಲ್ಲಿ ತೊಡಗಿದ್ದ ತಂಡದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಮೈಸೂರು ಎಸ್‌ಪಿ ಶ್ಲಾಘಿಸಿದ್ದಾರೆ. ಇನ್ನೂ ತನಿಖೆ ಪೂರ್ಣಗೊಂಡಿಲ್ಲ, ಉಳಿದ ಆರೋಪಿಗಳ ಹುಡುಕಾಟ ನಡೆಯುತ್ತಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular