ಕಡವೆ ಬೇಟೆಯಾಡಿ ಮಾಂಸ ಸೇವನೆ: ಓರ್ವ ಅರೆಸ್ಟ್, ಐವರು ಪರಾರಿ

ಶಿವಮೊಗ್ಗ: ಕಡವೆ ಬೇಟೆಯಾಡಿ ಮಾಂಸ ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ಶಿವಮೊಗ್ಗ ಜಿಲ್ಲೆ ಭದ್ರಾವತಿ ವಲಯದ ಹೊಸೂರು ಗ್ರಾಮದ ದಾನವಾಡಿ ಕಿರು ಅರಣ್ಯ ಪ್ರದೇಶದಲ್ಲಿ ಕಡವೆ ಬೇಟೆಯಾಡಿದ್ದ ಮಂಜುನಾಥ್(35) ಬಂಧಿತ ಆರೋಪಿ. ಇನ್ನು ಐವರು ತಲೆಮರೆಸಿಕೊಂಡಿದ್ದು, ಅವರಿಗಾಗಿ ಹುಡುಕಾಟ ನಡೆಸಲಾಗಿದೆ.

ಕೂಡ್ಲಿಗೆರೆ ಅರಬಿಳುಚಿ ಕ್ಯಾಂಪ್ ನಿವಾಸಿ ಮಂಜುನಾಥ್ ಮತ್ತು ಇತರರು ದಾನವಾಡಿ ಕಿರು ಅರಣ್ಯ ಪ್ರದೇಶದಲ್ಲಿ ಕಡವೆ ಬೇಟೆಯಾಡಿ ಅದರ ಮಾಂಸ ಸೇವಿಸಿದ್ದಾರೆ. ಕಡವೆ ಕಳೆಬರಗಳು ದೊರೆತ ಆಧಾರದ ಮೇಲೆ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಭದ್ರಾವತಿ ಉಪ ವಿಭಾಗ ಅರಣ್ಯ ಸಂರಕ್ಷಣಾಧಿಕಾರಿ ಆಶಿಶ್ ರೆಡ್ಡಿ, ಚನ್ನಗಿರಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರತ್ನಪ್ರಭ ಮಾರ್ಗದರ್ಶನದಲ್ಲಿ ಭದ್ರಾವತಿ ವಲಯ ಅರಣ್ಯಾಧಿಕಾರಿ ಬಿ.ಹೆಚ್. ದುಗ್ಗಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದು, ಉಳಿದವರ ಪತ್ತೆಗೆ ಬಲೆ ಬೀಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read