HomeLatest Newsಕೌಟುಂಬಿಕ ವಿಚಾರಕ್ಕೆ ಗಲಾಟೆಯಾಗಿ ಪತ್ನಿ ಕೊಲೆ: ಪತಿ ಅರೆಸ್ಟ್

ಕೌಟುಂಬಿಕ ವಿಚಾರಕ್ಕೆ ಗಲಾಟೆಯಾಗಿ ಪತ್ನಿ ಕೊಲೆ: ಪತಿ ಅರೆಸ್ಟ್

ಉಡುಪಿ: ಕೌಟುಂಬಿಕ ವಿಚಾರದಲ್ಲಿ ಗಲಾಟೆಯಾಗಿ ಪತ್ನಿ ಕೊಲೆಗೈದ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪತಿಯಿಂದ ಹಲ್ಲೆಗೊಳಗಾದ ಪತ್ನಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣವನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸಲಾಗಿದೆ.

ಕಾರ್ಕಳದ ನೂರಾಳ್ ಬೆಟ್ಟು ಗ್ರಾಮದ ಸುನಿಲ್ ಕುಮಾರ್(44) ಬಂಧಿತ ಆರೋಪಿ. ಸುನಿಲ್ ಕುಮಾರ್ ಮತ್ತು ಆತನ ಪತ್ನಿ ಗೀತಾ ಅವರ ನಡುವೆ ಜನವರಿ 27ರಂದು ಗಲಾಟೆಯಾಗಿದೆ. ಈ ವೇಳೆ ಪತ್ನಿಯನ್ನು ಹೊಡೆದು ತೀವ್ರವಾಗಿ ಥಳಿಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಗೀತಾ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆ ಗೆ ದಾಖಲಿಸಲಾಗಿದೆ. ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿದೆ.

 ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ ಗೀತಾ ಚಿಕಿತ್ಸೆ ಫಲಕಾರಿಯಾಗದೆ ಫೆ. 2ರಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕೊಲೆ ಯತ್ನ ಪ್ರಕರಣವನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸಲಾಗಿದೆ. ಆರೋಪಿ ಈಗಾಗಲೇ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular