HomeKarnatakaಪತ್ನಿ ಮೇಲೆ ಅನುಮಾನ; ಮನಬಂದಂತೆ ಚಾಕುವಿನಿಂದ ಇರಿದು ಮಾರಣಾಂತಿಕ ಹಲ್ಲೆ ನಡೆಸಿದ ಪತಿ

ಪತ್ನಿ ಮೇಲೆ ಅನುಮಾನ; ಮನಬಂದಂತೆ ಚಾಕುವಿನಿಂದ ಇರಿದು ಮಾರಣಾಂತಿಕ ಹಲ್ಲೆ ನಡೆಸಿದ ಪತಿ

ಬೆಂಗಳೂರು: ಪತ್ನಿ ಮೇಲಿನ ಅನುಮಾನಕ್ಕೆ ಪತಿಮಹಾಶಯ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಜೆ.ಪಿ.ನಗರದಲ್ಲಿ ನಡೆದಿದೆ.

ಹೆಚ್ ಎಸ್ ಆರ್ ಲೇಔಟ್ ನಲ್ಲಿ ಖಾಸಗಿ ಕಂಪನಿ ಉದ್ಯೋಗಿಯಾಗಿರುವ ಮಹಿಳೆ ಕೆಲಸದ ವಿಚಾರವಾಗಿ ತನ್ನ ಸಹೋದ್ಯೋಗಿಯನ್ನು ಮನೆಗೆ ಕರೆಸಿಕೊಂಡು ಮಾತನಾಡುತ್ತಿದ್ದರು. ಈ ವೇಳೆ ಮನೆಗೆ ಬಂದ ಪತಿ, ಪತ್ನಿ ಮೇಲೆ ಅನುಮಾನಗೊಂಡಿದ್ದಾನೆ.

ಇದೇ ಕಾರಣಕ್ಕೆ ಮನೆಯಲ್ಲಿದ್ದ ಚಾಕುವನ್ನು ತೆಗೆದುಕೊಂಡು ಪತ್ನಿಯನ್ನು ಮನಬಂದಂತೆ ಇರಿದಿದ್ದಾನೆ. ಗಂಭೀರವಾಗಿ ಹಲ್ಲೆಗೊಳಗಾಗಿರುವ ಪತ್ನಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದಾಳೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಂಪತಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ. ಕೆಲಸದ ವಿಚಾರವಾಗಿ ಸಹೋದ್ಯೋಗಿ ಜೊತೆ ಪತ್ನಿ ಮಾತನಾಡುತ್ತಿರುವುದನ್ನೇ ಅನುಮಾನಾಸ್ಪದವಾಗಿ ನೋಡಿ ಪತ್ನಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ ಪತಿ ಮಹಾಶಯ. ಆರೋಪಿ ಪತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಪುಟ್ಟೇನಹಳ್ಳಿ ಪೊಲೀಸ್ ಹಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular