HomeKarnatakaಪತಿ ಸಾವು.... ಮನನೊಂದ ಪತ್ನಿ-ಮಗಳು ಆತ್ಮಹತ್ಯೆಗೆ ಶರಣು

ಪತಿ ಸಾವು…. ಮನನೊಂದ ಪತ್ನಿ-ಮಗಳು ಆತ್ಮಹತ್ಯೆಗೆ ಶರಣು

ಮೈಸೂರು: ಪತಿ ಸಾವಿನ ಬೆನ್ನಲ್ಲೇ ಪತ್ನಿ ಹಾಗೂ ಮಗಳು ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಶಂಖಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗೀತಾ (40) ಹಾಗೂ 15 ವರ್ಷದ ಮಗಳು ಆತ್ಮಹತ್ಯೆ ಮಾಡಿಕೊಂಡವರು. ಕೆಲ ದಿನಗಳ ಹಿಂದೆ ಗೀತಾ ಪತಿ ಮೃತಪಟ್ಟಿದ್ದರು.ಪತಿಯ ಅಗಲಿಕೆಯಿಂದ ತೀವ್ರವಾಗಿ ಮನನೊಂದಿದ್ದ ಗೀತಾ, ಮಗಳೊಂದಿಗೆ ಸಾವಿನ ನಿರ್ಧಾರಕ್ಕೆ ಬಂದಿದ್ದಾರೆ. ಇಬ್ಬರೂ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular