ಪತಿ ತನ್ನನ್ನು ‘ಕೋತಿ’ ಎಂದು ಅಪಹಾಸ್ಯ ಮಾಡಿದ್ದರಿಂದ ಮನನೊಂದ ಪತ್ನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ನಡೆದ ಈ ಘಟನೆಯು ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಪತಿಯ ಒಂದು ಮಾತು ಪತ್ನಿಯ ಪ್ರಾಣವನ್ನೇ ಬಲಿಪಡೆಯಿತೇ ? ತನ್ನನ್ನು ಅಪಹಾಸ್ಯ ಮಾಡಿದ ಪತಿಯ ಮಾತಿನಿಂದ ಮನನೊಂದು ಗೃಹಿಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಅತ್ಯಂತ ಕ್ಷುಲ್ಲಕ ಕಾರಣಕ್ಕೆ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಡೆದಿದೆ. ಪತಿ ತನ್ನನ್ನು ತಮಾಷೆಯಾಗಿ ‘ಕೋತಿ’ (Monkey) ಎಂದು ಕರೆದಿದ್ದೇ ಈ ಸಾವಿಗೆ ಪ್ರೇರಣೆಯಾಗಿದೆ ಎಂದು ತಿಳಿದುಬಂದಿದೆ.ಲಕ್ನೋ ನಗರದ ಮಡಿಯಾಂವ್ (Madiaon) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
ಅಪಹಾಸ್ಯ
ಮೃತ ಮಹಿಳೆಯನ್ನು ಊರ್ಮಿಳಾ ಎಂದು ಗುರುತಿಸಲಾಗಿದೆ. ಆಕೆಯ ಪತಿ ಪದೇ ಪದೇ ಆಕೆಯನ್ನು ‘ಕೋತಿ’ ಎಂದು ಅಣಕಿಸುತ್ತಿದ್ದ ಎನ್ನಲಾಗಿದೆ. ಘಟನೆಯ ದಿನ ಕೂಡ ಪತಿ ಅದೇ ರೀತಿ ಅಪಹಾಸ್ಯ ಮಾಡಿದ್ದರಿಂದ ಮನನೊಂದ ಊರ್ಮಿಳಾ, ಪತಿ ಮನೆಯಿಂದ ಹೊರಗೆ ಹೋದ ಸಮಯದಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪತಿ ಮನೆಗೆ ಹಿಂದಿರುಗಿದಾಗ ಪತ್ನಿ ಶವವಾಗಿ ಪತ್ತೆಯಾಗಿದ್ದಾರೆ. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಸದ್ಯಕ್ಕೆ ಪೊಲೀಸರು ಈ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಆತ್ಮಹತ್ಯೆ ತಡೆ ಸಹಾಯವಾಣಿ : ಎಲ್ಲಾ ಸಮಸ್ಯೆಗಳಿಗೂ ಸಾವು ಪರಿಹಾರವಲ್ಲ. ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆ (022)27546669

