ಅನೈತಿಕ ಸಂಬಂಧ ಶಂಕೆಯಿಂದ ಪತಿಯಿಂದಲೇ ಪತ್ನಿ ಹತ್ಯೆ

ಬೆಂಗಳೂರು: ಅನೈತಿಕ ಸಂಬಂಧದ ಆರೋಪದಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಬಸವೇಶ್ವರನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

32 ವರ್ಷದ ನಾಗರತ್ನ ಅವರನ್ನು ಪತಿ ಅಯ್ಯಪ್ಪ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಅನಾಥಾಶ್ರಮದಲ್ಲಿದ್ದ ನಾಗರತ್ನಳನ್ನು 12 ವರ್ಷಗಳ ಹಿಂದೆ ಅಯ್ಯಪ್ಪ ಮದುವೆಯಾಗಿದ್ದ.  ದಂಪತಿಗೆ 11 ವರ್ಷದ ಮಗ, 7 ವರ್ಷದ ಮಗಳು ಇದ್ದು, ಇತ್ತೀಚೆಗೆ ಅಯ್ಯಪ್ಪ ಪತ್ನಿಯ ಮೇಲೆ ಅನುಮಾನ ಪಡುತ್ತಿದ್ದ.

ಇದೇ ವಿಚಾರಕ್ಕೆ ಮೂರು ದಿನಗಳಿಂದ ದಂಪತಿಯ ನಡುವೆ ಗಲಾಟೆ ಆಗುತ್ತಿತ್ತು. ಗಲಾಟೆಯ ವೇಳೆ ಚಾಕುವಿನಿಂದ ಇರಿದು ನಾಗರತ್ನ ಅವರನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಅಯ್ಯಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read