ಚಿಕ್ಕಬಳ್ಳಾಪುರ: ಪತಿ ಮಹಾಶಯನೊಬ್ಬ ವೇಲ್ ನಿಂದ ಕುತ್ತಿಗೆ ಬಿಗಿದು ಪತ್ನಿಯನ್ನೇ ಹತ್ಯೆಗೈದಿರುವ ದಾರುಣ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಇಲ್ಲಿನ ಗೌರಿಬಿದನೂರು ತಾಲೂಕಿನ ಹುದಗೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹಿಂದೂಪುರದ ಪಾವನಿ (30) ಪತಿಯಿಂದಲೇ ಕೊಲೆಯಾದ ಮಹಿಳೆ. ರಾಘವೇಂದ್ರ (35) ಪತ್ನಿಯನ್ನೇ ಹತ್ಯೆಗೈದ ಪತಿ.
ಪತಿ ಮಹಾಶಯ ಕುಡಿದು ಬಂದು ಹಿಂಸಿಸುತ್ತಿದ್ದ. ಎಂದಿನಂದೆ ಇಂದು ಕೂಡ ಪತಿ ರಾಘವೇಂದ್ರ ಕಂಠಪೂರ್ತಿ ಕುಡಿದು ಮನೆಗೆ ಬಂದಿದ್ದಾನೆ. ಇದನ್ನು ಪ್ರಶ್ನಿಸಿದ್ದಕ್ಕೆ ಕೋಪದ ಬರದಲ್ಲಿ ವೇಲ್ ನಿಂದ ಪತ್ನಿಯ ಕತ್ತು ಬಿಗಿದು ಉಸಿರುಗಟ್ಟಿಸಿ ಕೊಲೆಗೈದಿದ್ದಾನೆ.
ಗೌರಿಬಿದನೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಸ್ಥಳಕ್ಕೆದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
