ಕೊಲೆ ಯತ್ನ ಪ್ರಕರಣದಲ್ಲಿ ಪತಿಗೆ ಶಿಕ್ಷೆ: ಒಂದೂವರೆ ವರ್ಷದ ಪುತ್ರಿಯೊಂದಿಗೆ ಮಹಿಳೆ ಆತ್ಮಹತ್ಯೆ

ಉಡುಪಿ: ಕೊಲೆ ಯತ್ನ ಪ್ರಕರಣದಲ್ಲಿ ಪತಿ ದೋಷಿ ಎಂದು ಸಾಬೀತಾಗಿ ಶಿಕ್ಷೆಗೊಳಗಾದ ಹಿನ್ನೆಲೆಯಲ್ಲಿ ಒಂದೂವರೆ ವರ್ಷದ ಪುತ್ರಿಯೊಂದಿಗೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಆರೂರು ಗ್ರಾಮದಲ್ಲಿ ಘಟನೆ ನಡೆದಿದೆ. 35 ವರ್ಷದ ಸುಶ್ಮಿತಾ ಆತ್ಮಹತ್ಯೆ ಮಾಡಿಕೊಂಡವರು. ಒಂದೂವರೆ ವರ್ಷದ ಶ್ರೇಷ್ಟಾಳನ್ನು ಕೊಂದು ಸುಶ್ಮಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಕೃತ್ಯಕ್ಕೆ ತಾನೇ ಕಾರಣವೆಂದು ಹೇಳಿಕೊಂಡಿದ್ದಾರೆ.

ಆಕೆಯ ಪ್ರತಿ ಮತ್ತು ಅವರ ಕುಟುಂಬದವರು 2009 ರಲ್ಲಿ ನಡೆದ ಕೊಲೆಯತ್ನ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದರು. ಇತ್ತೀಚೆಗೆ ಹೈಕೋರ್ಟ್ ಕೂಡ ಶಿಕ್ಷೆಯನ್ನು ಎತ್ತಿ ಹಿಡಿದಿತ್ತು. ಈ ಬೆಳವಣಿಗೆಯಿಂದ ಸುಶ್ಮಿತಾ ದುಡುಕಿನ ನಿರ್ಧಾರ ಕೈಗೊಂಡಿರಬಹುದು ಎಂದು ಉಡುಪಿ ಎಸ್‌ಪಿ ಹರಿರಾಮ್ ಶಂಕರ್ ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರಹ್ಮಾವರ ಪೊಲೀಸರು ಕೇಸು ದಾಖಲಿಸಿಕೊಂಡು ಎಲ್ಲಾ ಆಯಾಮಗಳಿಂದಲೂ ತನಿಖೆ ಕೈಗೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read