HomeKarnatakaBREAKING NEWS: ಪತ್ನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನ; ಆರೋಪಿ ಪತಿ ಅರೆಸ್ಟ್

BREAKING NEWS: ಪತ್ನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನ; ಆರೋಪಿ ಪತಿ ಅರೆಸ್ಟ್

ಬೆಂಗಳೂರು: ಪತ್ನಿಯೊಂದಿಗೆ ಜಗಳವಾಡಿದ್ದ ಪತಿ ಮಹಾಶಯನೊಬ್ಬ ಆಕೆಯ ಮೇಲೆ ಸಂಶಯಗೊಂಡು ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಸುಂಕದಕಟ್ಟೆ ಬಳಿಯ ಸೊಲ್ಲಾಪುರದಮ್ಮ ದೇವಸ್ಥಾನ ಬಳಿ ನಡೆದಿದೆ.

ಜಯಪ್ರಕಾಶ್ (32) ತನ್ನ ತಂಗಿಯ ನಿಶ್ಚಿತಾರ್ಥಕ್ಕೆ ಬರಲಿಲ್ಲ ಎಂದು ಕ್ಯಾತೆ ತೆಗೆದು ಪತ್ನಿ ದಿವ್ಯಶ್ರೀಗೆ ಚಾಕುವಿನಿಂದ ಇರಿದಿದ್ದಾನೆ. ದಿವ್ಯಶ್ರೀ ಕಾಲಿನ ಭಾಗದಲ್ಲಿ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾಳೆ.

ಜಯಪ್ರಕಾಶ್ ವಿರುದ್ಧ ಕೊಲೆ ಯತ್ನ ಕೇಸ್ ದಾಖಲಾಗಿದ್ದು, ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಸದ್ಯ ಆರೋಪಿ ಪತಿ ಜಯಪ್ರಕಾಶ್ ನನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಯಪ್ರಕಾಶ್ ಹಾಗೂ ದಿವ್ಯಶ್ರೀ ಪ್ರೀತಿಸಿ 2019ರಲ್ಲಿ ವಿವಾಹವಾಗಿದ್ದರು. ಮದುವೆಗೆ ಪೋಷಕರ ವಿರೀಧವಿತ್ತು. ದಂಪತಿ ಬೆಂಗಳೂರಿನಲ್ಲಿ ವಾಸವಾಗಿದ್ದರು. ಜಯಪ್ರಕಾಶ್ ಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಪತ್ನಿ ದಿವ್ಯಶ್ರೀಯೇ ಮನೆಯ ಖರ್ಚು ವೆಚ್ಚ ನೋಡಿಕೊಳ್ಳುತ್ತಿದ್ದಳು. ಈ ನಡುವೆ ಪತಿ ಹಾಗೂ ಪತ್ನಿ ನಡುವೆ ಆಗಾಗ ಜಗಳವಾಗುತ್ತಿತ್ತು. ಪತ್ನಿ ಮೇಲಿನ ಅನುಮಾನದಿಂದ ಜಯಪ್ರಕಾಶ್ ಚಾಕುವಿನಿಂದ ಇರಿದು ಆಕೆಯ ಹಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular