ಬೆಂಗಳೂರು: ಪತ್ನಿ ವಿರುದ್ಧ ಕಿರುಕುಳ ಆರೋಪ ಮಾಡಿರುವ ಪತಿ ಮಹಾಶಯನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ರೇವಂತ್ ಕುಮಾರ್ ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ. ಬೆಂಗಳೂರು ದಕ್ಷಿಣ ಜಿಲ್ಲೆಯ ಹಾರೋಹಳ್ಳಿಯ ಅಣ್ಣೆದೊಡ್ಡಿ ಗ್ರಾಮದ ರೇವಂತ್ ಕುಮಾರ್, ಬಿಡದಿ ಬಳಿ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಐದು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ. ಈಗ ಪತ್ನಿ ವಿರುದ್ಧ ಕಿರುಕುಳ ಆರೋಪ ಮಾಡಿ, ಸೆಲ್ಫಿ ವಿಡಿಯೋ ಮಾಡಿಟ್ಟು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮನೆಯಲ್ಲಿ ಪತ್ನಿ ತುಂಬಾ ಕಷ್ಟಕೊಡುತ್ತಿದ್ದಾಳೆ. ನನ್ನ ಸಾವಿಗೆ ಪತ್ನಿಯೇ ಕಾರಣ ಎಂದು ಸೆಲ್ಫಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಂಗಳೂರು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.