HomeLatest NewsBIG NEWS: ಪತ್ನಿ ಕಿರುಕುಳ: 8 ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

BIG NEWS: ಪತ್ನಿ ಕಿರುಕುಳ: 8 ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

ಬೆಂಗಳೂರು: ಪತ್ನಿ ವಿರುದ್ಧ ಕಿರುಕುಳ ಆರೋಪ ಮಾಡಿ ಬ್ಯಾಂಕ್ ಉದ್ಯೋಗಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಗಿರಿನಗರದಲ್ಲಿ ನಡೆದಿದೆ.

ಗಗನ್ ರಾವ್ ಆತ್ಮಹತ್ಯೆಗೆ ಶರಣಾಗಿರುವ ಪತಿ. 8 ತಿಂಗಳ ಹಿಂದಷ್ಟೇ ಮೇಘನಾ ಎಂಬುವವರೊಂದಿಗೆ ಗಗನ್ ವಿವಾಹವಾಗಿತ್ತು. ಬ್ಯಾಂಕ್ ಉದ್ಯೋಗಿಯಾಗಿದ್ದ ಗಗನ್ ಗೆ ಪತ್ನಿ ಕಿರುಕುಳ ನೀಡುತ್ತಿದ್ದಳು ಎಂಬ ಆರೋಪ ಕೇಳಿಬಂದಿದೆ.

ಮೇಘನಾ, ಗಗನ್ ಮೇಲೆ ಅನುಮಾನಪಡುತ್ತಿದ್ದಳಂತೆ ಇದೇ ಕಾರಣ ಪತಿ-ಪತ್ನಿ ನಡುವೆ ಜಗಳವಾಗುತ್ತಿತ್ತು ಎನ್ನಲಾಗಿದೆ. ನಿನ್ನೆ ಕೂಡ ಪತಿ-ಪತ್ನಿ ನಡುವೆ ಗಲಾಟೆಯಾಗಿದೆ. ಇದರಿಂದ ನೊಂದ ಗಗನ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗಿರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular