ಮಂಡ್ಯ: ಬೆಳಕಿನ ಹಬ್ಬ ದೀಪಾವಳಿ ದಿನವೇ ಪತಿಮಹಾಶಯ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ಕಾಳೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪತಿ-ಪತ್ನಿ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಪತಿ ಲೋಕೇಶ್ ಪತ್ನಿ ಶ್ವೇತಾಳನ್ನು ಬರ್ಬರವಾಗಿ ಕೊಲೆಗೈದಿದ್ದಾನೆ.
ಮಂಡ್ಯ ಗ್ರಾಮಾಂತಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ಲೋಕೇಶ್ ನನ್ನು ಬಂಧಿಸಲಾಗಿದೆ.