HomeKarnatakaBIG NEWS: ಪತ್ನಿಯನ್ನು ಗುಂಡಿಟ್ಟು ಹತ್ಯೆಗೈದ ಪತಿ

BIG NEWS: ಪತ್ನಿಯನ್ನು ಗುಂಡಿಟ್ಟು ಹತ್ಯೆಗೈದ ಪತಿ

ಕಲಬುರ್ಗಿ: ಪತಿಮಹಾಶಯನೊಬ್ಬ ಪತ್ನಿಯನ್ನೇ ಗುಂಡಿಟ್ಟು ಹತ್ಯೆಗೈದಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಅಲ್ಲೂರು ಕೆ.ಗ್ರಾಮದಲ್ಲಿ ನಡೆದಿದೆ.

ಹನುಮವ್ವ (36) ಕೊಲೆಯಾದ ಮಹಿಳೆ. ಬಸವರಾಜ್ ಪತ್ನಿಯನ್ನು ಗುಂಡಿಟ್ಟು ಕೊಂದ ಪತಿ. ಮದುವೆಯಾದಾಗಿನಿಂದಲೂ ಪತಿ-ಪತ್ನಿ ನಡುವೆ ಜಗಳವಾಗುತ್ತಲೇ ಇತ್ತು. ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪತಿ ಕಿರುಕುಳಕ್ಕೆ ಬೇಸತ್ತು ಪತ್ನಿ ಹನುಮವ್ವ ತವರು ಮನೆ ಸೇರಿದ್ದಳು. ತವರು ಮನೆಯಲ್ಲಿದ್ದ ಪತ್ನಿಯನ್ನು ಬಸವರಾಜ್ ಗುಂಡಿಟ್ಟು ಹತ್ಯೆಗೈದಿದ್ದಾನೆ. ಚಿತ್ತಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular