HomeKarnataka50 ಸಾವಿರ ಹಣದಾಸೆಗಾಗಿ ಪತ್ನಿಯನ್ನೇ ತನ್ನ ಸ್ನೇಹಿತರಿಗೆ ಮಾರಾಟ ಮಾಡಿದ ಪಾಪಿ ಪತಿ

50 ಸಾವಿರ ಹಣದಾಸೆಗಾಗಿ ಪತ್ನಿಯನ್ನೇ ತನ್ನ ಸ್ನೇಹಿತರಿಗೆ ಮಾರಾಟ ಮಾಡಿದ ಪಾಪಿ ಪತಿ

ಅಹಮದಾಬಾದ್: ಇದೆಂತಹ ಹೇಯ ಘಟನೆ. ಪತಿ ಮಹಾಶಯನೊಬ್ಬ 50 ಸಾವಿರ ರೂಪಾಯಿ ಹಣದಾಸೆಗಾಗಿ ತನ್ನ ಪತ್ನಿಯನ್ನೇ ಸ್ನೇಹಿತರಿಗೆ ಮಾರಾಟ ಮಾಡಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ.

ಪಲನ್‌ಪುರ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ನಾಪತ್ತೆ ಪ್ರಕರಣದ ತನಿಖೆ ವೇಳೆ ಈ ಘಟನೆ ಬೆಳಕಿಗೆ ಬಂದಿದೆ. ಪತ್ನಿಯನ್ನು ಹಣಕ್ಕಾಗಿ ತನ್ನ ಸ್ನೇಹಿತರಿಗೆ ಮಾರಿದ ಕಿರಾತಕ ಪತಿ ಬಳಿಕ ಪೊಲೀಸ್ ಠಾಣೆಗೆ ಬಂದು ಪತ್ನಿ ನಾಅಪತ್ತೆಯಾಗಿದ್ದಾಳೆ ಎಂದು ದೂರು ನೀಡಿದ್ದಾನೆ. ಮೇ 11ರಂದು ಪತಿ ತನ್ನ ಪತ್ನಿ ಕಾಣೆಯಾಗಿದ್ದಾಳೆ ಎಂದು ಪೊಲೀಸರಿಗೆ ದೂರು ನೀಡಿದ್ದ. ಆದರೆ ದೂರು ನೀಡಿದ ಎರಡು ದಿನಗಳಲ್ಲೇ ಆತನು ಕೂಡ ನಾಪತ್ತೆಯಾಗಿದ್ದ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅನುಮಾನಗೊಂಡ ಪೊಲೀಸರು ತನಿಖೆ ಚುರುಕುಗೊಳಿಸಿದ್ದರು. ಬಳಿಕ ಪತಿಯನ್ನು ಪತ್ತೆ ಹಚ್ಚಿದ ಪೊಲೀಸರು, ನಂತರ ಮಹಿಳೆಯನ್ನೂ ರಕ್ಷಿಸಿದ್ದಾರೆ. ಪೊಲೀಸರ ಮುಂದೆ ಸಂತ್ರಸ್ತ ಮಹಿಳೆ ಹೇಳಿಕೆ ನೀಡಿದ್ದು, ಪತಿ ತನ್ನ ಸ್ನೇಹಿತರಿಗೆ ನನ್ನನ್ನು 50 ಸಾವಿರ ರೂ.ಗೆ ಮಾರಾಟ ಮಾಡಿದ್ದ. ಆತನ ಸ್ನೇಹಿತರು 10 ದಿನಗಳ ಕಾಲ ನಿರಂತರವಾಗಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ್ದಾಳೆ.

ಇದೇ ವೇಳೆ ಆರೋಪಿಗಳು ತನ್ನ ಚಿನ್ನಾಭರಣಗಳನ್ನು ಕಸಿದು ಸ್ಥಳೀಯ ಜುವೆಲ್ಲರಿ ಅಂಗಡಿಯಲ್ಲಿ ಮಾರಾಟ ಮಾಡಿದ್ದಾರೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಮಹಿಳೆಯ ಹೇಳಿಕೆ ಆಧರಿಸಿ ಪಲನ್‌ಪುರ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ, ಮಾನವ ಕಳ್ಳಸಾಗಣೆ, ಕ್ರಿಮಿನಲ್ ಸಂಚು ಸೇರಿದಂತೆ ವಿವಿಧ ಆರೋಪಗಳಡಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಪತಿ ಸೇರಿ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.‌

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular