HomeLatest NewsBIG NEWS: ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಆತ್ಮಹತ್ಯೆಗೆ ಶರಣಾದ ಪತಿ

BIG NEWS: ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಆತ್ಮಹತ್ಯೆಗೆ ಶರಣಾದ ಪತಿ

ಮಂಗಳೂರು: ಪತಿ ಮಹಾಶಯನೊಬ್ಬ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಬಳಿಕ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಾಸರಗೋಡಿನ ಕಂಗಾಡಿನನಲ್ಲಿ ಎಂಬಲ್ಲಿ ನಡೆದಿದೆ.

ಕಡಪ್ಪುರದ ಭಾವಾನಗರದ ನಿವಾಸಿ ಇಬ್ರಾಹಿಂ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಇಬ್ರಾಹಿಂ, ಪತ್ನಿ ಮರ್ಯಮ್ ಅವರ ತಲೆಗೆ ಗಂಭೀರವಾಗಿ ಹೊಡೆದು ಹಲ್ಲೆ ನಡೆಸಿದ್ದ. ಮಾರಣಾಂತಿಕವಾಗಿ ಹಲ್ಲೆಗೊಳಗಾದ ಮರ್ಯಮ್ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮರ್ಯಮ್ ಅವರ ಕೂಗಾಟ ಕೇಳಿ ಅಕ್ಕಪಕ್ಕದ ಮನೆಯವು ಧಾವಿಸಿ ಬಂದಿದ್ದಾರೆ. ತಲೆಯಿಂದ ರಕ್ತ ಸೋರುತ್ತಿತ್ತು. ಗಂಭೀರವಾಗಿ ಗಾಯಗೊಂಡಿದ್ದರಿಂದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತ ಇಬ್ರಹಿಂ ಸ್ಥಳದಿಂದ ಪರಾರಿಯಾಗಿದ್ದ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪತ್ನಿ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಇತ್ತ ಮನೆಯ ಬಳಿಯೇ ಇರುವ ಮರದ ಕೊಂಬೆಗೆ ನೇಣು ಬಿಗಿದುಕೊಂಡು ಇಬ್ರಾಹಿಂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೊಸದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೌಟುಂಬಿಕ ಕಲಹದಿಂದ ಪತ್ನಿ ಮೇಲೆ ಹಲ್ಲೆ ನಡೆಸಿ, ಬಳಿಕ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಹೊಸದುರ್ಗ ಪೊಲೀಸರು ತನಿಖೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular