HomeLive Newsಸ್ವಿಟ್ಜರ್ಲೆಂಡ್ ಪ್ರವಾಸಕ್ಕೆ ಹೋಗಿದ್ದ ಹೈದರಾಬಾದ್ ಮೂಲದ ಉದ್ಯಮಿ ದಂಪತಿ ನಿಗೂಢ ನಾಪತ್ತೆ: ತನಿಖೆ ವೇಳೆ ಶಾಕಿಂಗ್...

ಸ್ವಿಟ್ಜರ್ಲೆಂಡ್ ಪ್ರವಾಸಕ್ಕೆ ಹೋಗಿದ್ದ ಹೈದರಾಬಾದ್ ಮೂಲದ ಉದ್ಯಮಿ ದಂಪತಿ ನಿಗೂಢ ನಾಪತ್ತೆ: ತನಿಖೆ ವೇಳೆ ಶಾಕಿಂಗ್ ಮಾಹಿತಿ ಬಯಲು

ಹೈದರಾಬಾದ್: ಸ್ವಿಟ್ಜರ್ಲೆಂಡ್‌ಗೆ ಪ್ರವಾಸಕ್ಕೆ ಹೋಗಿದ್ದ ಹೈದರಾಬಾದ್‌ ನ ಉದ್ಯಮಿ ದಂಪತಿ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ದಂಪತಿ ಕೆಲ ದಿನಗಳಿಂದ ಕಾಣೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

ದಂಪತಿ ನಾಪತ್ತೆ ಹಿಂದೆ 50 ಕೋಟಿ ರೂಪಾಯಿಗಳಆರ್ಥಿಕ ವಂಚನೆಯ ಆರೋಪ ಕೂಡ ಕೇಳಿಬಂದಿದೆ. ನಾಪತ್ತೆಯಾದ ದಂಪತಿಯನ್ನು ಉದ್ಯಮಿ ಪಬ್ಬಾ ಚಂದ್ರಶೇಖರ್ (51) ಹಾಗೂ ಅವರ ಪತ್ನಿ ಸ್ವಪ್ನಾ (42) ಎಂದು ಗುರುತಿಸಲಾಗಿದೆ.

ಜೂನ್ 22 ರಂದು ರಜೆಗಾಗಿ ವಿದೇಶಕ್ಕೆ ತೆರಳಿದ್ದ ಇವರು ಜುಲೈ 8 ರವರೆಗೆ ತಮ್ಮ ಕುಟುಂಬಸ್ಥರೊಂದಿಗೆ ಸಂಪರ್ಕದಲ್ಲಿದ್ದರು. ಆದರೆ ಅಂದಿನಿಂದ ಇಬ್ಬರ ಮೊಬೈಲ್ ಫೋನ್‌ಗಳು ಸ್ವಿಚ್ ಆಫ್ ಆಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಂದೆ-ತಾಯಿ ಜುಲೈ 8 ರ ನಂತರ ಯಾವುದೇ ಕರೆಗಳಿಗೂ ಸಿಗುತ್ತಿಲ್ಲ ಎಂದು ಮಗಳು ಆತಂಕಗೊಂಡಿದ್ದಾಳೆ. 23 ವರ್ಷದ ಮಗಳು ಶ್ರೇಯಾ ಹೈದರಾಬಾದ್ ಪೊಲೀಸರಿಗೆ ದೂರು ನೀಡಿದ್ದಾರೆ. ಮಗಳ ದೂರಿನ ಆಧಾರದ ಮೇಲೆ ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ದಂಪತಿ ಭಾರತದಿಂದ ಹೊರಟ ವಲಸೆ ದಾಖಲೆಗಳು, ವಿಮಾನದ ಟಿಕೆಟ್‌ಗಳು ಹಾಗೂ ಸ್ವಿಟ್ಜರ್ಲೆಂಡ್‌ನಲ್ಲಿ ಅವರ ಕೊನೆಯ ಲೊಕೇಶನ್ ಎಲ್ಲಿದೆ ಎಂಬುದನ್ನು ಪತ್ತೆಹಚ್ಚಲು ಸೈಬರ್ ಕ್ರೈಮ್ ಪೊಲೀಸರು ಇಂಟರ್‌ಪೋಲ್ ನೆರವು ಕೋರಲು ಸಜ್ಜಾಗಿದ್ದಾರೆ.

ಪೊಲೀಸ್ ತನಿಖೆ ವೇಳೆ ದಂಪತಿಯ ಕರಾಳ ಮುಖ ಬಯಲಾಗಿದೆ. ಉದ್ಯಮಿ ಚಂದ್ರಶೇಖರ್ ಕಳೆದ ಕೆಲವು ವರ್ಷಗಳಿಂದ ಪರಿಚಯಸ್ಥರು ಹಾಗೂ ಹೂಡಿಕೆದಾರರು ಸೇರಿದಂತೆ ಸುಮಾರು 60 ಕ್ಕೂ ಹೆಚ್ಚು ಜನರಿಂದ ಬರೋಬ್ಬರಿ 50 ಕೋಟಿ ರೂಪಾಯಿ ಹಣವನ್ನು ಸಂಗ್ರಹಿಸಿರುವುದು ಪತ್ತೆಯಾಗಿದೆ.

ತಮ್ಮ ವೈಯಕ್ತಿಕ ಮತ್ತು ಬಿಸಿನೆಸ್ ಅಗತ್ಯಗಳ ಹೆಸರಿನಲ್ಲಿ, ಬ್ಯಾಂಕುಗಳಿಗಿಂತ ಹೆಚ್ಚಿನ ಲಾಭ ಅಥವಾ ಬಡ್ಡಿ ನೀಡುವುದಾಗಿ ನಂಬಿಸಿ ಚಂದ್ರಶೇಖರ್ ಜನರಿಂದ ಕೋಟ್ಯಂತರ ರೂಪಾಯಿ ಕೈಗಡ ಪಡೆದಿದ್ದರು. ಹೂಡಿಕೆದಾರರು ಹಣ ವಾಪಸ್ ಕೇಳಲು ಶುರುಮಾಡಿದ ಬೆನ್ನಲ್ಲೇ ದಂಪತಿ ಸ್ವಿಟ್ಜರ್ಲೆಂಡ್ ಪ್ಲಾನ್ ಮಾಡಿದ್ದರು. ಹೀಗಾಗಿ ಇವರು ಉದ್ದೇಶಪೂರ್ವಕವಾಗಿಯೇ ಜನರಿಗೆ ವಂಚಿಸಿ, ವಿದೇಶದಲ್ಲಿ ಹಣ ಅಡಗಿಸಿಟ್ಟು ದೇಶ ಬಿಟ್ಟು ಹೋಗಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಜಾಗತಿಕವಾಗಿ ಭಾರತದ ಬ್ಯಾಂಕುಗಳಿಗೆ ಅಥವಾ ಹೂಡಿಕೆದಾರರಿಗೆ ವಂಚಿಸುವ ಆರ್ಥಿಕ ಅಪರಾಧಿಗಳು ಲಂಡನ್ ಅಥವಾ ಸ್ವಿಟ್ಜರ್ಲೆಂಡ್‌ನಂತಹ ದೇಶಗಳನ್ನೇ ಆಯ್ಕೆ ಮಾಡಿಕೊಳ್ಳುತ್ತಾರೆ.

ಸ್ವಿಟ್ಜರ್ಲೆಂಡ್‌ನ ಬ್ಯಾಂಕಿಂಗ್ ಕಾನೂನುಗಳು ಖಾತೆದಾರರ ಮಾಹಿತಿಯನ್ನು ಅತ್ಯಂತ ರಹಸ್ಯವಾಗಿಡುತ್ತವೆ. ಹೀಗಾಗಿ ಕಪ್ಪುಹಣ ಮತ್ತು ವಂಚನೆಯ ಹಣವನ್ನು ಅಲ್ಲಿಗೆ ವರ್ಗಾಯಿಸುವುದು ಸುಲಭ ಎಂಬ ನಂಬಿಕೆ ಇದೆ. ಭಾರತದೊಂದಿಗೆ ಅಪರಾಧಿಗಳ ಹಸ್ತಾಂತರ ಒಪ್ಪಂದ ಇದ್ದರೂ, ವಿದೇಶಿ ನ್ಯಾಯಾಲಯಗಳಲ್ಲಿನ ಕಾನೂನು ಹೋರಾಟ ವರ್ಷಗಟ್ಟಲೆ ಎಳೆಯುವುದರಿಂದ ವಂಚಕರು ಇಂತಹ ದೇಶಗಳಲ್ಲಿ ಆಶ್ರಯ ಪಡೆಯಲು ಯತ್ನಿಸುತ್ತಾರೆ.

ಸದ್ಯಕ್ಕೆ ಹೈದರಾಬಾದ್ ಪೊಲೀಸರು ವಂಚನೆಗೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ಎಫ್‌ಐಆರ್ ದಾಖಲಿಸಿಲ್ಲವಾದರೂ, ದಂಪತಿಯ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆ ಚಾಲ್ತಿಯಲ್ಲಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular