HomeIndiaBREAKING: ನಿರ್ಮಾಣಹಂತದ 7 ಅಂತಸ್ತಿನ ಕಟ್ಟಡ ಕುಸಿತ: ಇಬ್ಬರು ಸಾವು

BREAKING: ನಿರ್ಮಾಣಹಂತದ 7 ಅಂತಸ್ತಿನ ಕಟ್ಟಡ ಕುಸಿತ: ಇಬ್ಬರು ಸಾವು

ಹೈದರಾಬಾದ್: ನಿರ್ಮಾಣಹಂತದ 7 ಅಂತಸ್ತಿನ ಕಟ್ಟಡ ಕುಸಿದು ಬಿದ್ದ ಪರಿಣಾಮ ಅವಶೇಷಗಳ ಅಡಿಯಲ್ಲಿ ಸಿಲುಕಿ ಇಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

ಹೈದರಾಬಾದ್ ನ ಮಾದಾಪುರದ ಅಂಜೈ ನಗರದಲ್ಲಿ ಈ ದುರಂತ ಸಂಭವಿಸಿದೆ. ಘಟನಾಸ್ಥಳದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಹಲವರು ಅವಶೇಷಗಳ ಅಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಬರದಿಂದ ಸಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾ ಸ್ಥಳದಲ್ಲಿ ಪೊಲೀಸರು ಹಾಗೂ ರಕ್ಷಣಾ ತಂಡ ಬೀಡು ಬಿಟ್ಟಿದ್ದು, ರಕ್ಷಣಾ ಕಾರ್ಯಾಚರಣೆ ಚುರುಕುಗೊಂಡಿದೆ. ಮೂಲಗಳ ಪ್ರಕಾರ ಏಳು ಅಂತಸ್ತಿನ ಕಟ್ಟಡವನ್ನು ಅಕ್ರಮವಾಗಿ ನಿರ್ಮಿಸಲಾಗುತ್ತಿತ್ತು. ಕೆಲ ತಿಂಗಳ ಹಿಂದೆ ಅಕ್ರಮ ಕಟ್ಟಡಕ್ಕೆ ತಡೆ ನೀಡಲಾಗಿತ್ತು. ಇದೀಗ ಮತ್ತೆ ಅದೇ ಕಟ್ಟಡದಲ್ಲಿ ಕಾಮಗಾರಿ ಆರಂಭವಾಗಿತ್ತು. ಇದೀಗ ಕಟ್ಟಡ ಕುಸಿದು ಬಿದ್ದಿದ್ದು, ಇಬ್ಬರು ಮೃತಪಟ್ಟಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular