HomeIndiaಮೂರು ವರ್ಷದ ಮಗುವನ್ನು ಸೇತುವೆ ಮೇಲೆ ಸ್ಕೂಟರ್ ನಲ್ಲೇ ಬಿಟ್ಟು ನದಿಗೆ ಹಾರಿದ ದಂಪತಿ

ಮೂರು ವರ್ಷದ ಮಗುವನ್ನು ಸೇತುವೆ ಮೇಲೆ ಸ್ಕೂಟರ್ ನಲ್ಲೇ ಬಿಟ್ಟು ನದಿಗೆ ಹಾರಿದ ದಂಪತಿ

ಹೈದರಾಬಾದ್: ಮೂರು ವರ್ಷದ ಮಗುವನ್ನು ಸೇತುವೆ ಮೇಲೆ ಸ್ಕೂಟರ್ ನಲ್ಲಿ ಕೂರಿಸಿ ದಂಪತಿ ನದಿಗೆ ಹಾರಿರುವ ಘಟನೆ ಆಂಧ್ರಪ್ರದೇಶದ ಪಶ್ಚಿಮ ಗೋದಾವರಿಯಲ್ಲಿ ನಡೆದಿದೆ.

ಇಲ್ಲಿನ ಪಶ್ಚಿಮ ಗೋದಾವರಿ ಜಿಲ್ಲೆಯ ಚಿಂಚಿನಾಡ ವಸಿಷ್ಠ ಸೇತುವೆಯ ಮೇಲೆ ಈ ಘಟನೆ ನಡೆದಿದೆ. ಪಶ್ಚಿಮ ಗೋದಾವರಿ ಜಿಲ್ಲೆಯ ವೆಲ್ಪುರು ಗ್ರಾಮದ ನಿವಾಸಿಗಳಾದ ದೊಡ್ಡ ಸಾಯಿ (29) ಮತ್ತು ಅವರ ಪತ್ನಿ ಶಿರೀಷಾ (28) ನದಿಗೆ ಹಾರಿರುವ ದಂಪತಿ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಡರಾತ್ರಿ ರಾತ್ರಿ 10 ಗಂಟೆ ಸುಮಾರಿಗೆ ಮಗುವಿನೊಂದಿಗೆ ಸ್ಕೂಟರ್‌ನಲ್ಲಿ ಸೇತುವೆ ಬಳಿ ಬಂದ ದಂಪತಿ, ಮಗುವನ್ನು ಸ್ಕೂಟರ್ ಮೇಲೆಯೇ ಬಿಟ್ಟು ಸೇತುವೆ ಮೇಲಿಂದ ಗೋದಾವರಿ ನದಿಗೆ ಹಾರಿದ್ದಾರೆ ಎಂದು ಶಂಕಿಸಲಾಗಿದೆ. ಕತ್ತಲು, ಚಳಿ ನಡುವೆ ಮಗು ಒಂಟಿಯಾಗಿ ಸೇತುವೆ ಮೇಲೆ ಅಳುತ್ತಿರುವುದನ್ನು ಗಮನಿಸಿದ ದಾರಿಹೋಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕಾಅಗಮಿಸಿದ ಪೊಲೀಸರು ಮಗುವನ್ನು ರಕ್ಷಿಸಿ ಸ್ಕೂಟರ್ ಅನ್ನು ಜಪ್ತಿ ಮಾಡಿದ್ದಾರೆ. ಬಳಿಕ ಮಗುವನ್ನು ಕುಟುಂಬದ ಸದಸ್ಯರಿಗೆ ಒಪ್ಪಿಸಿದ್ದಾರೆ. ಸದ್ಯ ದಂಪತಿಗಾಗಿ ನದಿಯಲ್ಲಿ ಶೋಧ ಕಾರ್ಯ ಮುಂದುವರೆದಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ ಮಗುವಿನ ತಂದೆ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದು, ಆಂಧ್ರಪ್ರದೇಶಕ್ಕೆ ಹಿಂತಿರುಗುವ ಮೊದಲು ಗಲ್ಫ್‌ನಲ್ಲಿದ್ದರು. ಸಾಲದ ಹೊರೆ ಹಾಗೂ ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದರು. ಇದೇ ಕಾರಣಕ್ಕೆ ದಂಪತಿ ತಮ್ಮ ಮನೆಯನ್ನು ಮಾರಾಟ ಮಾಡಲು ನಿರ್ಧರಿಸಿದ್ದರು ಎನ್ನಲಾಗಿದೆ.

ದಂಪತಿಯ ದುಡುಕಿನ ನಿರ್ಧಾರಕ್ಕೆ ಮೂರು ವರ್ಷದ ಕಂದಮ್ಮ ಅನಾಥವಾಗಿದೆ. ಘಟನೆಗೆ ನಿಖರವಾದ ಕಾರಣ ಪತ್ತೆಹಚ್ಚಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular