HomeIndiaSHOCKING: ಖಾಸಗಿ ಅಂಗ ಕತ್ತರಿಸಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ

SHOCKING: ಖಾಸಗಿ ಅಂಗ ಕತ್ತರಿಸಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ

ಹೈದರಾಬಾದ್: ಎಂಬಿಬಿಎಸ್ ದ್ವಿತೀಯ ವರ್ಷದ ವಿದ್ಯಾರ್ಥಿಯೊಬ್ಬ ತನ್ನ ಖಾಸಗಿ ಅಂಗ ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೀಕ್ಷಿತ್ ರೆಡ್ಡಿ(21) ಭಾನುವಾರ ರಾತ್ರಿ ಹೈದರಾಬಾದ್‌ನ ಹೊರವಲಯದಲ್ಲಿರುವ ಮೇಡ್ಚಲ್ ಮಲ್ಕಾಜ್‌ ಗಿರಿ ಜಿಲ್ಲೆಯ ಪಾಪಿರೆಡ್ಡಿ ನಗರದಲ್ಲಿನ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೆಡ್ಡಿ ಅವರ ಕುಟುಂಬದವರು ವಾಪಸ್ ಬಂದು ಪದೇ ಪದೇ ಬಾಗಿಲು ತಟ್ಟಿದರೂ ಯಾವುದೇ ಪ್ರತಿಕ್ರಿಯೆ ಬಾರದೆ ಇದ್ದ ಕಾರಣ ಮನೆಯವರು ಕಿಟಕಿ ತೆರೆದು ನೋಡಿದಾಗ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂದಿದೆ. ಕೂಡಲೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆಂಬ್ಯುಲೆನ್ಸ್‌ನೊಂದಿಗೆ ಧಾವಿಸಿದ ವೈದ್ಯಕೀಯ ಸಿಬ್ಬಂದಿ ಅವರು ಮೃತಪಟ್ಟಿರುವುದನ್ನು ಗಮನಿಸಿದ್ದಾರೆ.

ಯುವಕ ಚಾಕುವಿನಿಂದ ಖಾಗಿ ಅಂಗ ಕತ್ತರಿಸಿಕೊಂಡು ರಕ್ತಸ್ರಾವವಾಗಿ ಮೃತಪಟ್ಟಿದ್ದಾನೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳಾಂತರಿಸಲಾಯಿತು. ರೆಡ್ಡಿ ಸಿಕಂದರಾಬಾದ್‌ನ ಗಾಂಧಿ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿದ್ದ. ವಾರಂಗಲ್ ಜಿಲ್ಲೆಯ ಹಳ್ಳಿಯೊಂದರ ಯುವಕನ ಪೋಷಕರು ಎರಡು ದಶಕಗಳ ಹಿಂದೆ ಹೈದರಾಬಾದ್‌ಗೆ ವಲಸೆ ಹೋಗಿದ್ದರು.

ರೆಡ್ಡಿಗೆ ಮಾನಸಿಕ ಸಮಸ್ಯೆಗಳಿದ್ದು, ಈ ಹಿಂದೆಯೂ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ಆರೋಗ್ಯ ಸಮಸ್ಯೆಯಿಂದ ಖಿನ್ನತೆಗೆ ಒಳಗಾಗಿದ್ದ ಎನ್ನಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular