HomeIndiaBIG NEWS: ರೆಸ್ಟೋರೆಂಟ್ ನಲ್ಲಿ ದುಷ್ಕರ್ಮಿಗಳ ಅಟ್ಟಹಾಸ; ಮ್ಯಾನೇಜರ್ ನನ್ನು ಗುಂಡಿಟ್ಟು ಹತ್ಯೆ

BIG NEWS: ರೆಸ್ಟೋರೆಂಟ್ ನಲ್ಲಿ ದುಷ್ಕರ್ಮಿಗಳ ಅಟ್ಟಹಾಸ; ಮ್ಯಾನೇಜರ್ ನನ್ನು ಗುಂಡಿಟ್ಟು ಹತ್ಯೆ

ಹೈದರಾಬಾದ್: ರೆಸ್ಟೋರೆಂಟ್ ಮೇಲೆ ದಾಳಿ ನಡೆಸಿರುವ ದುಷ್ಕರ್ಮಿಗಳು ಅಲ್ಲಿನ ಮ್ಯಾನೇಜರ್ ನನ್ನು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

ಮಿಯಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮದೀನಗುಡಾದ ಕಿನ್ನೇರಾ ಗ್ರ್ಯಾಂಡ್ ಸಂದರ್ಶಿನಿ ಹೋಟೆಲ್ ನಲ್ಲಿ ದುಷ್ಕರ್ಮಿಗಳು ರೆಸ್ಟೋರೆಂಟ್ ಮೇಲೆ ದಾಳಿ ನಡೆಸಿದ್ದಾರೆ. ಮ್ಯಾನೇಜರ್ ಓರ್ವರನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆಯಲ್ಲಿ ಮ್ಯಾನೇಜರ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕೋಲ್ಕತ್ತಾ ಮೂಲದ ಹೋಟೆಲ್ ಸಿಬ್ಬಂದಿ ದೇವೇಂದ್ರ ಗಯಾನ್ ಎಂಬುವವರ ಮೇಲೆ 5 ಸುತ್ತು ಗುಂಡು ಹಾರಿಸಿದ್ದಾರೆ. ದೇವೇಂದ್ರ ಗಯಾನ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೆಲ್ಮೆಟ್ ಧರಿಸಿ ಬೈಕ್ ನಲ್ಲಿ ಬಂದಿದ್ದ ದುಷ್ಕರ್ಮಿಗಳು ಹೋಟೆಲ್ ನಲ್ಲಿ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಶೂಟರ್ ಗಳು ಕೋಲ್ಕತ್ತಾ ಮೂಲದವರಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular