ಹೈದರಾಬಾದ್: ಹೈದರಾಬಾದ್ ನ ಗುಲ್ಜಾರ್ ಹೌಸ್ ಕಟ್ಟಡದಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.
ಇಂದು ಬೆಳಿಗ್ಗೆ 6:30ಕ್ಕೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೂವರು ಮಹಿಳೆಯರು, ಇಬ್ಬರು ಮಕ್ಕಳು ಸೇರಿದಂತೆ 10 ಜನರು ಸಾವನ್ನಪ್ಪಿದ್ದರು. ಹಲವರು ಗಾಯಗೊಂಡಿದ್ದರು. ಆದರೆ ಇತ್ತೀಚಿನ ಮಾಹಿತಿ ಪ್ರಕಾರ ಸಾವಿನ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿದ್ದು ಬೆಂಕಿ ತಹಬದಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ