ಹೈದರಾಬಾದ್: ಪೀಠೋಪಕರಣ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಇಬ್ಬರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿರುವ ಘಟನೆ ಹೈದರಾಬಾದ್ ನ ನಾಂಪಲ್ಲಿ ಪ್ರದೇಶದಲ್ಲಿ ನಡೆದಿದೆ.
ನಾಲ್ಕು ಅಂತಸ್ತಿನ ಪೀಠೋಪಕರಣ ಕಟ್ಟಡದ ಮಳಿಗೆಯಲ್ಲಿ ಈ ದುರಂತ ಸಂಭವಿಸಿದೆ. ಬೆಂಕಿ ಅವಘಡದಲ್ಲಿ ಅವರು ಉಸಿರುಗಟ್ಟಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮೃತರಲ್ಲಿ ಇಬ್ಬರು ಮಕ್ಕಳು, ಓರ್ವ ವೃದ್ಧೆ ಸೇರಿ ಐವರು ಇದ್ದಾರೆ. ಮೃತದೇಹಗಳನ್ನು ಕಟ್ಟಡದ ನೆಲಮಾಳಿಗೆಯಿಂದ ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ತನಿಖೆ ನಡೆಸಲಾಗುತ್ತಿದೆ. ಮಳಿಗೆ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ. ಕಟ್ಟಡದ ಎರಡು ನೆಲಮಾಳಿಗೆಗಳಲ್ಲಿ ಪೀಠೋಪಕತಣಗಳು, ಕಚ್ಚಾ ವಸ್ತುಗಳು, ರಾಸಾಯನಿಕಗಳು, ಒಲಾಸ್ಟಿಕ್, ಹಾಸಿಕೆಗಳು ಇದ್ದವು. ಅಗ್ನಿ ಅವಘಡದಲ್ಲಿ ಅಪಾರಪ್ರಮಾಣದ ವಸ್ತುಗಳು ಸುಟ್ಟು ಕರಕಲಾಗಿವೆ ಎಂದು ತಿಳಿಸಿದ್ದಾರೆ.

