HomeKarnataka'ನನಗೂ ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು, ಆದ್ರೆ ಹುಡ್ಗಿ ಒಪ್ಪಲಿಲ್ಲ'-ಸಿಎಂ ಸಿದ್ದರಾಮಯ್ಯ

‘ನನಗೂ ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು, ಆದ್ರೆ ಹುಡ್ಗಿ ಒಪ್ಪಲಿಲ್ಲ’-ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನನಗೂ ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು. ಆದರೆ ಹುಡುಗಿ ಒಪ್ಪಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಅವರು ಜನಸ್ಪಂದನ ಮತ್ತು ಮಾನವ ಮಂಟಪ ಆಯೋಜಿಸಿದ್ದ ಅಂತರ್ಜಾತಿ ವಿವಾಹಿತರ ನೋಂದಣಿ ವೇದಿಕೆಯ ವೆಬ್ ಸೈಟ್ ಉದ್ಘಾಟಿಸಿ ಮಾತನಾಡಿದರು. ನನಗೂ ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು. ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ. ಆದರೆ ಹುಡುಗಿಯೂ ಒಪ್ಪಲಿಲ್ಲ, ಅವರ ಮನೆಯವರೂ ಒಪ್ಪಲಿಲ್ಲ ಎಂದರು.

ಅಂತರ್ಜಾತಿ ವಿವಾಹಗಳ ಜತೆಗೆ ಮಹಿಳೆಯರಿಗೆ ಹಾಗೂ ಎಲ್ಲಾ ವರ್ಗದ ದುರ್ಬಲರಿಗೆ ಆರ್ಥಿಕ ಶಕ್ತಿ ಸಿಕ್ಕಾಗ ಸಮಾಜದಲ್ಲಿ ಚಲನೆಯುಂಟಾಗುತ್ತದೆ. ಸಮ ಸಮಾಜದ ಆಶಯ ಈಡೇರಲು, ಜಾತಿ ನಾಶವಾಗಲು ಸಾಧ್ಯ. ಇದಕ್ಕಾಗಿ ನಮ್ಮ ಸರ್ಕಾರ ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುವ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಅಂಬೇಡ್ಕರ್ ಮತ್ತು ಕುವೆಂಪು ಅವರ ಆಶಯದಂತೆ ಸಮ ಸಮಾಜ ನಿರ್ಮಾಣ ಆಗಬೇಕಾದರೆ ಅಂತರ್ಜಾತಿ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು. ಇದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular