HomeKarnatakaನಾನು ಬಸವಾದಿ ಶರಣರ ಅಪ್ಪಟ ಅನುಯಾಯಿ-ಸಿಎಂ ಸಿದ್ದರಾಮಯ್ಯ

ನಾನು ಬಸವಾದಿ ಶರಣರ ಅಪ್ಪಟ ಅನುಯಾಯಿ-ಸಿಎಂ ಸಿದ್ದರಾಮಯ್ಯ

ವಿಜಯಪುರ : ಮೌಡ್ಯ, ಕಂದಾಚಾರ, ಜಾತಿ ತಾರತಮ್ಯದ ವಿರುದ್ಧ ವಚನಕ್ರಾಂತಿ ಆರಂಭಿಸಿದ್ದರಿಂದ ನಾನು ಬಸವಾದಿ ಶರಣರ ಅನುಯಾಯಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ದುಡಿಯುವವರು ಯಾರೋ, ಕೂತು ತಿನ್ನುವವರು ಇನ್ಯಾರೋ ಎನ್ನುವ ಪರಿಸ್ಥಿತಿ ಸಮಾಜದಲ್ಲಿತ್ತು. ಈ ತಾರತಮ್ಯ ಮತ್ತು ಮೇಲು-ಕೀಳು ಹೋಗಲಾಡಿಸಲು ಬಸವಣ್ಣನವರ ನೇತೃತ್ವದಲ್ಲಿ ವಚನಕ್ರಾಂತಿ ಶುರು ಆಯಿತು. ಈ ಕಾರಣಕ್ಕೆ ನಾನು ಅವರ ಅನುಯಾಯಿ.

ಕ್ರಾಂತಿಯ ಪ್ರಭಾವದಲ್ಲಿ ಸಮಾಜ ಪೂರ್ಣ ಬದಲಾಗುವ ಮೊದಲೇ ವಚನ ಕ್ರಾಂತಿಗೆ ಅಡ್ಡಗಾಲು ಹಾಕಿದರು. ಆದ್ದರಿಂದ ಇನ್ನೂ ಬಸವಣ್ಣನವರ “ಇವ ನಮ್ಮವ ಇವ ನಮ್ಮವ” ಎನ್ನುವ ಆಶಯ ಈಡೇರದೆ ಜಾತಿ ವ್ಯವಸ್ಥೆ ಗಟ್ಟಿಯಾಗಿದೆ. ಶರಣಶ್ರೇಷ್ಠ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದಕ್ಕಾಗಿ ನನ್ನನ್ನು ಸನ್ಮಾನಿಸಿ, ಆಶೀರ್ವದಿಸಿದ ವಿವಿಧ ಮಠಗಳ 12 ಮಂದಿ ಶರಣ ಸ್ವಾಮೀಜಿಗಳಿಗೆ ಹೃದಯಪೂರ್ವಕ ಧನ್ಯವಾದಗಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular