`ಕರ್ನಾಟಕದ ಎಲ್ಲ ಹೋರಾಟಗಳಲ್ಲಿ ನಾನು ಸದಾ ನಿಮ್ಮೊಂದಿಗೆ ಇದ್ದೇನೆ’ : `ಕಾವೇರಿ ಹೋರಾಟ’ಕ್ಕೆ ನಟ ಸುದೀಪ್ ಸಾಥ್| Actor Sudeep

ಬೆಂಗಳೂರು : ಕಾವೇರಿ ನೀರು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ಇಂದು ರೈತ ಸಂಘಟನೆಗಳು ಬೆಂಗಳೂರು ಬಂದ್ ಗೆ ಕರೆ ಕೊಟ್ಟಿದ್ದು, ಬೆಂಗಳೂರಿನಲ್ಲಿ ಕಾವೇರಿ ಹೋರಾಟದ ಕಿಚ್ಚು ತೀವ್ರಗೊಂಡಿದೆ.

ಈ ನಡುವೆ ಕಾವೇರಿ ಹೋರಾಟಕ್ಕೆ ನಟ ಕಿಚ್ಚ ಸುದೀಪ್ ಅವರು ಬೆಂಬಲ ಸೂಚಿಸಿದ್ದಾರೆ. ಸಮಸ್ತ ಕನ್ನಡ ಜನತೆಗೆ ನಮಸ್ಕಾರ; ಕಾವೇರಿ ಸಮಸ್ಯೆ ಈ ವರ್ಷವೂ ಶುರುವಾಗಿದೆ. ಕನ್ನಡ ಪರ ಸಂಘಟನೆಗಳು ರೈತರು ಹೋರಾಟ ನೆಡೆಸುತ್ತಿದ್ದಾರೆ. ಕನ್ನಡ ದ ನೆಲ ಜಲ ಭಾಷೆ ಯ ಎಲ್ಲ ಹೋರಾಟಗಳಲ್ಲಿ ನಾನು ಸದಾ ನಿಮ್ಮೊಂದಿಗೆ ಇದ್ದೇನೆ.

ಮುಂಗಾರುಮಳೆಯ ಅಭಾವದಿಂದ ರೈತರಿಗೆ ಜನತೆಯ ಕೃಷಿ ಮಾತ್ರವಲ್ಲದೆ ಕುಡಿಯುವ ನೀರಿಗೆ ತೀವ್ರ ತೊಂದರೆಯಾಗಿದೆ. ಮುಂಗಾರಿನ ಹೊರತಾಗಿ ನಮಗೆ ಕುಡಿಯುವ ನೀರಿಗಾಗಿ ಬೇರೆ ಮೂಲಗಳಿಲ್ಲ ನಾವು ಕಾವೇರಿಯನ್ನೇ ನಂಬಿದ್ದೇವೆ. ನಾನು ತಿಳಿದುಕೊಂಡಂತೆ ಬರ ಅಧ್ಯಯನ ಸಮಿತಿ- ಕಾವೇರಿ ಸಮಿತಿಯ ತಂತ್ರಜ್ಞ ರು ಕೂಡಲೇ ಟ್ರಬಿನಲ್ ನ್ಯಾಯಾಲಯಕ್ಕೆ ಮತ್ತು ಕೇಂದ್ರ ಸರ್ಕಾರಕ್ಕೆ ಪ್ರಸ್ತುತ ಕರ್ನಾಟಕ ದ ಬರ ಪರಿಸ್ಥಿತಿ ಯನ್ನು ತುರ್ತಾಗಿ ಮನವರಿಕೆ ಮಾಡಿಕೊಡಬೇಕಿದೆ. ಹಿಂದಿನ ಕೆಲವು ಮುಖ್ಯಮಂತ್ರಿ ಗಳಂತೆಯೇ ನಮ್ಮ ಮುಖ್ಯ ಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ನವರು ತಮಿಳುನಾಡಿನ ಮುಖ್ಯ ಮಂತ್ರಿಗಳೊಂದಿಗೆ ಸೌಹಾರ್ದ ಮಾತುಕತೆ ಯ ಮೂಲಕ ಸಮಸ್ಯೆಯನ್ನು ತಾತ್ಕಾಲಿಕ ವಾಗಿ ಬಗೆಹರಿಸಬಹುದು ಎಂದು ಹಿರಿಯರು ಹೇಳಿದ್ದನ್ನು ಕೇಳಿ ತಿಳಿದುಕೊಂಡಿದ್ದೇನೆ. ಸದ್ಯದ ಬರ-ಜಲ ಹಾಹಾಕಾರಕ್ಕೆ ಪರಿಹಾರ ಒದಗಿಸಲು ಮಾನ್ಯ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡುತ್ತೇನೆ. ಕೇಂದ್ರ ಸರ್ಕಾರಕ್ಕೆ ಕರ್ನಾಟಕ ದ ಪರಿಸ್ಥಿಯನ್ನು ಅರ್ಥ ಮಾಡಿಸಲು ಎಲ್ಲ ಪಕ್ಷದ ನಾಯಕರು ಒಗ್ಗಟ್ಟಾಗಿ ಮುಂದಾಗಲು ಮನವಿ ಮಾಡುತ್ತೇನೆ ತಮಿಳುನಾಡು ರೈತರಿಗೂ ಕುರವೈ ಬೆಳೆಗೆ ನೀರು ಸಿಗಲಿ ಆದರೆ ನಮ್ಮ ಕುಡಿಯುವ ನೀರಿನ ಅಭಾವ ಮೊದಲು ಬಗೆಹರಿಯಲಿ.ಆದಷ್ಟು ಬೇಗ ಈ ಸಮಸ್ಯೆ ಬಗೆ ಹರಿದು ಹೋರಾಟಕ್ಕೆ ಜಯವಾಗಲಿ.

ಇದರ ಜೊತೆಗೆ ಉತ್ತರ ಕರ್ನಾಟಕದ ಕೃಷ್ಣಾ ನದಿ -ಮಹದಾಯಿ ನದಿ ಮತ್ತು ಕಳ ಸಾ ಬಂಡೂರಿ ವಿವಾದಗಳು ಬಗೆ ಹರಿದು ಜನರ ಸಂಕಷ್ಟ ತೀರಲೆಂದು ಆಶಿಸುವೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read