ದಾವಣಗೆರೆ: ಕಾಂಗ್ರೆಸ್ ಪಕ್ಷದ 55 ಶಾಸಕರನ್ನು ಟಾರ್ಗೆಟ್ ಮಾಡಿದ್ದಾರೆ ಎಂದು ಶಾಸಕ ಕಾಶಪ್ಪನವರ್ ಹೇಳಿಕೆಗೆ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿದ ಅವರು, ನಮ್ಮ ಶಾಸಕರನ್ನು ಟಾರ್ಗೆಟ್ ಮಾಡಿದ ವಿಚಾರ ನನಗೆ ಗೊತ್ತಿಲ್ಲ. ಶಾಸಕ ಕಾಶಪ್ಪನವರ್ ಹೇಳಿದ್ದಾರೆ ಎಂದರೆ ಅವರಿಗೆ ಗೊತ್ತಿರಬೇಕು. ಆ ವಿಚಾರ ನನಗೆ ಗೊತ್ತಿಲ್ಲ ಎಂದು ತಿಳಿಸಿದ್ದಾರೆ
ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ ಎಂದು ಸಂತೋಷ್ ಲಾಡ್ ಪುನರುಚ್ಚರಿಸಿದ್ದಾರೆ. ಯಾರೇ ಮುಖ್ಯಮಂತ್ರಿಯಾದರೂ ಶಾಸಕರ ಬೆಂಬಲದಿಂದಲೇ ಆಗುತ್ತಾರೆ. ಈಗ ಮುಖ್ಯಮಂತ್ರಿ ಅವರೇ ಬದಲಾವಣೆ ಇಲ್ಲವೆಂದು ಹೇಳಿದ್ದಾರೆ. ಹೀಗಾಗಿ ಸಿಎಂ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.