BIG NEWS : ನಾನು ಯಾವುದೇ ಪ್ರಭಾವಕ್ಕೆ ಮಣಿಯಲ್ಲ, ಜೈನಮುನಿ ಹತ್ಯೆ ಪ್ರಕರಣ ‘CBI’ ಗೆ ವಹಿಸುವ ಅಗತ್ಯವಿಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ಜೈನಮುನಿ, ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಯಾವುದೇ ಪ್ರಭಾವಕ್ಕೆ  ಮಣಿಯಲ್ಲ, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಅಗತ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಜೈನಮುನಿ, ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಪ್ರಕರಣದಲ್ಲಿ ನಾನು ಯಾವುದೇ ಒತ್ತಡಕ್ಕೆ ಮಣಿಯಲ್ಲ. ಜೈನಮುನಿ ಹತ್ಯೆ ಪ್ರಕರಣವನ್ನು ಸಿಬಿಐಗೆ ತನಿಖೆಗೆ ನೀಡಲ್ಲ. ತಿ.ನರಸೀಪುರದಲ್ಲಿ ನಡೆದ ಘಟನೆ ಆಕಸ್ಮಿಕ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಜೈನಮುನಿ ಬರ್ಬರ ಹತ್ಯೆ ಪ್ರಕರಣದ ಬಗ್ಗೆ ಸದನದಲ್ಲಿ ಮಾತನಾಡಿದ ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ, ಪೊಲೀಸರ ಸಾಮರ್ಥ್ಯದ ಬಗ್ಗೆ ನಮಗೆ ಯಾವುದೇ ಆಕ್ಷೇಪ ಇಲ್ಲ. ಆದರೆ ಕೆಲವೊಮ್ಮೆ ಬೇರೆ ಒತ್ತಡ ಬಂದಾಗ ಏನೂ ಮಾಡಲು ಆಗುವುದಿಲ್ಲ ಎಂದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ, ಆರಗ ಜ್ಞಾನೇಂದ್ರ ಗೃಹಸಚಿವರಾಗಿ ಕೆಲಸ ಮಾಡಿದವರು. ಒತ್ತಡಕ್ಕೆ ಏನೋ ನಡೆದು ಬಿಡುತ್ತದೆ ಅನ್ನೋದು ಏನು? ಆ ರೀತಿ ನಿಮ್ಮ ಕಾಲದಲ್ಲಿ ಇತ್ತೇನ್ರಿ ಎಂದು ಗರಂ ಆದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read