HomeLatest NewsBIG NEWS : ಸ್ವಇಚ್ಛೆಯಿಂದ ರಾಜೀನಾಮೆ ನೀಡುತ್ತಿದ್ದೇನೆ, ಯಾವುದೇ ನೋವಿಲ್ಲ : CM ಸಿದ್ದರಾಮಯ್ಯ ಹೇಳಿಕೆ

BIG NEWS : ಸ್ವಇಚ್ಛೆಯಿಂದ ರಾಜೀನಾಮೆ ನೀಡುತ್ತಿದ್ದೇನೆ, ಯಾವುದೇ ನೋವಿಲ್ಲ : CM ಸಿದ್ದರಾಮಯ್ಯ ಹೇಳಿಕೆ

ಬೆಂಗಳೂರು :   ಕರ್ನಾಟಕದ ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡುವ ನಿರ್ಧಾರವನ್ನು ಇಂದು ಬೆಳಿಗ್ಗೆ ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ನಡೆದ ಉಪಹಾರ ಸಭೆಯಲ್ಲಿ ಪ್ರಕಟಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ ನಡೆದ ಸಂಪುಟ ಸಹೋದ್ಯೋಗಿಗಳ ಸಭೆಯಲ್ಲಿ ತಾವು ಸ್ವಇಚ್ಛೆಯಿಂದಲೇ ರಾಜೀನಾಮೆ ನೀಡುತ್ತಿರುವುದಾಗಿ ಘೋಷಿಸಿದ್ದು, ಮಧ್ಯಾಹ್ನ 3 ಗಂಟೆಗೆ ರಾಜೀನಾಮೆ ಪತ್ರ ಸಲ್ಲಿಸುವ ಸಾಧ್ಯತೆಯಿದೆ. ಪಕ್ಷದ ಹೈಕಮಾಂಡ್‌ನ ಸೂಚನೆಯ ಮೇರೆಗೆ ಈ ನಿರ್ಧಾರ ಕೈಗೊಂಡಿದ್ದು, ರಾಜ್ಯಪಾಲರ ಅನುಪಸ್ಥಿತಿಯಲ್ಲೂ ಸಾಂವಿಧಾನಿಕ ಪ್ರಕ್ರಿಯೆ ಮೂಲಕ ರಾಜೀನಾಮೆ ಸಲ್ಲಿಕೆಗೆ ಸಿದ್ಧತೆ ನಡೆದಿದೆ.

ಈ ಸಭೆಯಲ್ಲಿ ಮುಖ್ಯಮಂತ್ರಿಗಳು ತಾವು ಹುದ್ದೆಯಿಂದ ಕೆಳಗಿಳಿಯುತ್ತಿರುವುದಾಗಿ ತಿಳಿಸಿದ್ದಾರೆ. “ನನಗೆ ಯಾವುದೇ ನೋವಿಲ್ಲ, ನಾನು ಸ್ವಇಚ್ಛೆಯಿಂದಲೇ ರಾಜೀನಾಮೆ ನೀಡುತ್ತಿದ್ದೇನೆ” ಎಂದು ಸಿದ್ದರಾಮಯ್ಯ ಅವರು ತಮ್ಮ ಸಚಿವರಿಗೆ ತಿಳಿಸಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಮುಖ್ಯಮಂತ್ರಿಗಳು ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸುವ ಸಾಧ್ಯತೆ ಇದೆ. ಈ ಮಹತ್ವದ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸಂಪುಟದ ಹಲವು ಸಚಿವರು ಭಾಗವಹಿಸಿದ್ದರು. ಕಾಂಗ್ರೆಸ್ ಹೈಕಮಾಂಡ್‌ನ ಸೂಚನೆಯ ಮೇರೆಗೆ ಮತ್ತು ಪಕ್ಷದ ಆಂತರಿಕ ನಿರ್ಧಾರದಂತೆ ಈ ಬದಲಾವಣೆ ನಡೆಯುತ್ತಿದೆ ಎಂದು ವರದಿಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯಪಾಲರು ಪ್ರಸ್ತುತ ಕೇಂದ್ರ ಸ್ಥಾನದಲ್ಲಿಲ್ಲದಿದ್ದರೂ, ಸಾಂವಿಧಾನಿಕ ಪ್ರಕ್ರಿಯೆಯ ಪ್ರಕಾರ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಸಲ್ಲಿಸಲು ಅವಕಾಶವಿದೆ. ಮುಂದಿನ ದಿನಗಳಲ್ಲಿ ನೂತನ ಮುಖ್ಯಮಂತ್ರಿಯ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular