HomeKarnatakaನಾನು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ : ಮಾಜಿ ಸಚಿವ ವಿ.ಸೋಮಣ್ಣ

ನಾನು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ : ಮಾಜಿ ಸಚಿವ ವಿ.ಸೋಮಣ್ಣ

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಾನು ಕೂಡ ಆಕಾಂಕ್ಷಿ ಎಂದು ಮಾಜಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ಬೆಂಗಳೂರಿನ ಗೋವಿಂರಾಜನಗರದಲ್ಲಿ ನಿನ್ನೆ ನಡೆದ ಬೆಂಬಲಿಗರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನಾನು ಬೆಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ, ಕಳೆದ 20 ವರ್ಷಗಳಿಂದ ಒಂದೇ ಸಮುದಾಯಕ್ಕೆ ಟಿಕೆಟ್ ನೀಡಲಾಗುತ್ತಿದೆ. ಈ ಬಾರಿ ಬೇರೆ ಸಮುದಾಯಕ್ಕೆ ಟಿಕೆಟ್ ಕೊಡಬೇಕು. ನಾನು ಕೂಡ ಟಿಕೆಟ್ ಆಕಾಂಕ್ಷಿ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ವರುಣ ಹಾಗೂ ಚಾಮರಾಜನಗರದಲ್ಲಿ ಸ್ಪರ್ಧಿಸಿದ್ದ ವಿ.ಸೋಮಣ್ಣ ಅವರು ಎರಡೂ ಕ್ಷೇತ್ರಗಳಲ್ಲಿ ಸೋಲನುಭವಿಸಿದ್ದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular