BIG NEWS: ಜೆಡಿಎಸ್ ಜೊತೆ ಮೈತ್ರಿ ಆಗಿದ್ದರೂ ಮಂಡ್ಯದಲ್ಲಿ ನಾನೇ ಬಿಜೆಪಿ ಅಭ್ಯರ್ಥಿ; ಸಂಸದೆ ಸುಮಲತಾ ಅಂಬರೀಶ್ ಹೇಳಿಕೆ

ಲೋಕಸಭಾ ಚುನಾವಣೆಯಲ್ಲಿ ದಳಪತಿಗಳಿಗೆ ನಡುಕ ಹುಟ್ಟಿಸಿದ ಸುಮಲತಾ ಅಂಬರೀಶ್ ರಾಜ್ಯ ರಾಜಕೀಯಕ್ಕೆ ಎಂಟ್ರಿ?

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಎದುರಿಸುವ ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದು, ನಾಲ್ಕರಿಂದ ಐದು ಕ್ಷೇತ್ರಗಳನ್ನು ಜೆಡಿಎಸ್ ಅಭ್ಯರ್ಥಿಗಳಿಗೆ ಬಿಟ್ಟು ಕೊಡಲಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಈ ಪೈಕಿ ಜೆಡಿಎಸ್ ಪ್ರಬಲವಾಗಿರುವ ಹಾಸನ, ಮಂಡ್ಯ, ತುಮಕೂರು ಪ್ರಮುಖವಾಗಿವೆ ಎಂದು ಹೇಳಲಾಗುತ್ತಿದ್ದು, ಇದರ ಮಧ್ಯೆ ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿರುವ ಸಂಸದೆ ಸುಮಲತಾ ಅಂಬರೀಶ್, ಮಹತ್ವದ ಹೇಳಿಕೆ ನೀಡಿದ್ದಾರೆ.

ಬಿಜೆಪಿ, ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದರೂ ಸಹ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ನಾನೇ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದ ಮಾಜಿ ಸಚಿವ ನಾರಾಯಣಗೌಡ, ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡಿರುವುದಕ್ಕೆ ನನ್ನ ವಿರೋಧವಿದೆ ಎಂದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read