HomeLatest NewsBIG NEWS: ಡಿ.ಕೆ. ಶಿವಕುಮಾರ್ ವಿರುದ್ಧ ಚುನಾವಣೆಯಲ್ಲಿ ಗೆದ್ದು ಸಿಎಂ ಆಗಿದ್ದೇನೆ: ಇದೇ ಮೊದಲ ಬಾರಿಗೆ...

BIG NEWS: ಡಿ.ಕೆ. ಶಿವಕುಮಾರ್ ವಿರುದ್ಧ ಚುನಾವಣೆಯಲ್ಲಿ ಗೆದ್ದು ಸಿಎಂ ಆಗಿದ್ದೇನೆ: ಇದೇ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ಬಹಿರಂಗ

ನವದೆಹಲಿ: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಕುರಿತಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ನನ್ನ ನಡುವೆ ಯಾವುದೇ ಒಪ್ಪಂದ ಆಗಿಲ್ಲ. ನಾಯಕತ್ವಕ್ಕಾಗಿ ಡಿ.ಕೆ. ಶಿವಕುಮಾರ್ ಮತ್ತು ನನ್ನ ನಡುವೆ ನಡೆದ ಚುನಾವಣೆಯಲ್ಲಿ ಗೆದ್ದು ನಾನು ಮುಖ್ಯಮಂತ್ರಿ ಆಗಿದ್ದೇನೆ. ನಾನೇ ಐದು ವರ್ಷ ಮುಖ್ಯಮಂತ್ರಿ ಆಗಿ ಅಧಿಕಾರ ಪೂರ್ಣಗೊಳಿಸುತ್ತೇನೆ.

ಹೀಗೆಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಭಾರಿ ಸಂಚಲನಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಅಧಿಕಾರ ಹಂಚಿಕೆ ಒಪ್ಪಂದ ಕುರಿತಾಗಿ ಹೇಳಿಕೆಗಳು ಬರುತ್ತಿದ್ದವು. ಅಂತಹ ಒಪ್ಪಂದವೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಇದೇ ಮೊದಲ ಬಾರಿಗೆ ಹೇಳಿದ್ದಾರೆ.

ರಾಜ್ಯದಲ್ಲಿ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ವೇಳೆ ಆಂತರಿಕ ಚುನಾವಣೆ ನಡೆಯಿತು ಎಂಬುದನ್ನು ಕೂಡ ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಬಹಿರಂಗಪಡಿಸಿದ್ದು, ಭಾರೀ ಸಂಚಲನ ಮೂಡಿಸಿದೆ. ಈ ಹೇಳಿಕೆ ನೀಡುವ ಮೂಲಕ ಸಿಎಂ ಸಿದ್ದರಾಮಯ್ಯ ಸ್ವಪಕ್ಷ ಮತ್ತು ವಿಪಕ್ಷ ಸೇರಿದಂತೆ ಎಲ್ಲರಿಗೂ ಐದು ವರ್ಷ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ. ಅಧಿಕಾರ ಹಂಚಿಕೆ ಇಲ್ಲ ಎಂದು ಸ್ಪಷ್ಟ ಸಂದೇಶ ರವಣಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಕಾಂಗ್ರೆಸ್ ಗೆದ್ದಾಗ ಹಿಂದೆ ನಮ್ಮಿಬ್ಬರ ನಡುವೆ ಚುನಾವಣೆ ನಡೆಸಿದ್ದರು. ನಾನು ಆಗ ಗೆದ್ದಿದ್ದೇನೆ. ಡಿಕೆಶಿಯಾಗಲಿ, ಶಾಸಕರಾಗಲಿ ಮುಖ್ಯಮಂತ್ರಿ ಆಗುವ ಆಸೆ ಪಡುವುದು ತಪ್ಪಲ್ಲ. ಆದರೆ, ಸಿಎಂ ಕುರ್ಚಿ ಖಾಲಿ ಇಲ್ಲ. ನಾಯಕತ್ವ ಬದಲಾವಣೆ ಇಲ್ಲ ಎಂದು ಹೇಳಿದ್ದಾರೆ. ಈ ರೀತಿ ಸಿದ್ದರಾಮಯ್ಯ ಹೇಳಿಕೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಪಡೆಯಲ್ಲಿ ಸಂಚಲನ ಮೂಡಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular