HomeLatest News'ದೇವರಾಜ್ ಅರಸು' ದಾಖಲೆ ಮುರಿಯಲೆಂದು ನಾನು ರಾಜಕೀಯ ಮಾಡಿಲ್ಲ, ಇದು ಕಾಕತಾಳೀಯ- CM ಸಿದ್ದರಾಮಯ್ಯ

‘ದೇವರಾಜ್ ಅರಸು’ ದಾಖಲೆ ಮುರಿಯಲೆಂದು ನಾನು ರಾಜಕೀಯ ಮಾಡಿಲ್ಲ, ಇದು ಕಾಕತಾಳೀಯ- CM ಸಿದ್ದರಾಮಯ್ಯ

ಬೆಂಗಳೂರು : ‘ದೇವರಾಜ್ ಅರಸು ದಾಖಲೆ ಮುರಿಯಲೆಂದು ನಾನು ರಾಜಕೀಯ ಮಾಡಿಲ್ಲ ಇದು ಕಾಕತಾಳೀಯ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು .ದಾಖಲೆಗಳು ಮುರಿಯಲೆಂದೇ ನಿರ್ಮಾಣವಾಗುತ್ತವೆ. ಪ್ರಸ್ತುತ ನಾನು ಪೂರೈಸಲಿರುವ ಅವಧಿಯನ್ನು ಮೀರಲಿರುವ ಮತ್ತೊಬ್ಬ ನಾಯಕರೂ ಮುಂದೆ ಬರಬಹುದು. ನನಗಿಂತ ಹೆಚ್ಚಿನ ಬಾರಿ ಬಜೆಟ್ ಮಂಡಿಸುವ ನಾಯಕರೂ ಮುಂದೆ ಬರಬಹುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರ ದಾಖಲೆಯನ್ನು ಮುರಿಯಲೆಂದು ನಾನು ರಾಜಕೀಯ ಮಾಡಿಲ್ಲ. ಈ ದಾಖಲೆ ಕಾಕತಾಳೀಯವಾಗಿ ಆಗಿದೆ. ಜನರ ಆಶೀರ್ವಾದದಿಂದ ದೇವರಾಜ ಅರಸು ಅವರ ದಾಖಲೆಯನ್ನು ಮುರಿಯಲು ಸಾಧ್ಯವಾಗಿದೆ. ಮುಖ್ಯಮಂತ್ರಿಯಾಗಿ ಈ ಅವಧಿಯನ್ನು ಪೂರ್ಣಗೊಳಿಸುವ ವಿಶ್ವಾಸವಿದೆ. ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡಬೇಕಷ್ಟೆ. ನನ್ನ ಅಭಿಮಾನಿಗಳು ನಾಟಿ ಕೋಳಿ ಪಲಾವ್ ಹಂಚಿದ ಸುದ್ದಿ ಗಮನಿಸಿದೆ. ಸಾಮಾನ್ಯವಾಗಿ ಹಳ್ಳಿಗಳಲ್ಲಿ ನೆಂಟರು ಬಂದಾಗ ಮಾತ್ರ ನಾಟಿ ಕೋಳಿ ಅಡುಗೆ ಮಾಡುತ್ತಾರೆ. ನಾನೂ ಹಳ್ಳಿಯವನಾಗಿರುವುದರಿಂದ ಸಹಜವಾಗಿ ನಾಟಿ ಕೋಳಿ, ರಾಗಿ ರಾಗಿ ಮುದ್ದೆ ತಿನ್ನುತ್ತಿದ್ದೆ. ಹಳ್ಳಿಯವರ ಊಟದ ಕ್ರಮ ಇದಾಗಿದ್ದು, ನಾನು ಮುಖ್ಯಮಂತ್ರಿಯಾಗಿರುವುದರಿಂದ ಸ್ವಲ್ಪ ಪ್ರಚಾರ ಸಿಗುತ್ತಿದೆ ಎಂದರು.

ಇಷ್ಟು ವರ್ಷಗಳ ರಾಜಕಾರಣ ತೃಪ್ತಿ ತಂದಿದೆ. ಜನರ ಕೆಲಸ ಮಾಡುವುದು ಖುಷಿಯ ಸಂಗತಿ. ರಾಜಕಾರಣ ಎಂದರೆ ಬಡವರು, ದಲಿತರು, ಹಿಂದುಳಿದವರ ಕೆಲಸ ಮಾಡಿಕೊಡುವುದು. ಹೆಚ್ಚೆಂದರೆ ಶಾಸಕನಾಗಬೇಕೆಂದು ಅಂದುಕೊಂಡಿದ್ದೆ. ಶಾಸಕನಾದೆ, ಮಂತ್ರಿ, ಉಪಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಹಾಗೂ ಮುಖ್ಯಮಂತ್ರಿಯೂ ಆದೆ. ಅವಕಾಶಗಳು ಸಿಕ್ಕಿದ್ದರಿಂದ ಇವೆಲ್ಲ ಆಗಲು ಸಾಧ್ಯವಾಯಿತು. ದೇವರಾಜ ಅರಸು ಹಾಗೂ ನಾನು ಇಬ್ಬರೂ ಮೈಸೂರಿನವರೇ ಆಗಿದ್ದು, ಇಬ್ಬರೂ ದೀರ್ಘಾವಧಿಯ ಮುಖ್ಯಮಂತ್ರಿಗಳಾಗಿದ್ದೇವೆ. ಆದರೆ ಕಾಲಘಟ್ಟ ಬೇರೆ ಬೇರೆಯಾಗಿದೆ. 1972ರಿಂದ 80ವರೆಗೆ ಮುಖ್ಯಮಂತ್ರಿಯಾಗಿದ್ದರು. ನಾನು ಎರಡು ಅವಧಿಗೆ ಆಗಿದ್ದೇನೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ್ ಅರಸು ಅವರು ಸುದೀರ್ಘ ಅವಧಿಗೆ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ದಾಖಲೆ ಸರಿಗಟ್ಟಲು ಜನರ ಆಶೀರ್ವಾದವೇ ಕಾರಣ. ತಾಲ್ಲೂಕು ಬೋರ್ಡ್ ಸದಸ್ಯನಾದ ನಂತರದ ನನ್ನ ರಾಜಕೀಯ ಜೀವನದಲ್ಲಿ ಸಚಿವನಾಗುವ ಮತ್ತು ಮುಖ್ಯಮಂತ್ರಿಯಾಗುವ ನಿರೀಕ್ಷೆಯಿರಲಿಲ್ಲ. 13 ಚುನಾವಣೆಗಳನ್ನೂ ಎದುರಿಸಿ 9 ಬಾರಿ ಗೆಲುವು ಸಾಧಿಸಿದ್ದೇನೆ. ಕಡಿಮೆ ಜನಸಂಖ್ಯೆಯ ಅರಸು ಸಮುದಾಯದವರಾಗಿದ್ದ ದೇವರಾಜ ಅರಸು ಅವರು ಜನಪ್ರಿಯ ನಾಯಕರಾಗಿದ್ದರು. ಅಂತಹ ಮಹಾನ್ ನಾಯಕನಿಗೂ ಮತ್ತು ನನಗೂ ಹೋಲಿಕೆ ಸರಿಯಲ್ಲ. ಅರಸು ಅವರ ಅವಧಿಯಲ್ಲಿ ರಾಜ್ಯದ ಪರಿಸ್ಥಿತಿ ವಿಭಿನ್ನವಾಗಿತ್ತು. ಅವರು ಒಂದು ಬಾರಿ ಅವಿರೋಧವಾಗಿಯೂ ಆಯ್ಕೆಯಾಗಿದ್ದರು.

ದಾಖಲೆಗಳು ಮುರಿಯಲೆಂದೇ ನಿರ್ಮಾಣವಾಗುತ್ತವೆ. ಪ್ರಸ್ತುತ ನಾನು ಪೂರೈಸಲಿರುವ ಅವಧಿಯನ್ನು ಮೀರಲಿರುವ ಮತ್ತೊಬ್ಬ ನಾಯಕರೂ ಮುಂದೆ ಬರಬಹುದು. ನನಗಿಂತ ಹೆಚ್ಚಿನ ಬಾರಿ ಬಜೆಟ್ ಮಂಡಿಸುವ ನಾಯಕರೂ ಮುಂದೆ ಬರಬಹುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular