BIG NEWS : ‘ಶಕ್ತಿ ಯೋಜನೆ’ ನಿಲ್ಲಿಸುತ್ತೇವೆ ಎಂದು ನಾನು ಹೇಳಿಲ್ಲ : DCM ಡಿಕೆ ಶಿವಕುಮಾರ್ ಸ್ಪಷ್ಟನೆ.!

ಬೆಂಗಳೂರು : ‘ಶಕ್ತಿ ಯೋಜನೆ’ ನಿಲ್ಲಿಸುತ್ತೇವೆ ಎಂದು ನಾನು ಹೇಳಿಲ್ಲ ,   ಶಕ್ತಿ ಯೋಜನೆ ಬಗ್ಗೆ ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಶಕ್ತಿ ಯೋಜನೆ ಬಗ್ಗೆ ನನ್ನ ಹೇಳಿಕೆಯನ್ನು ತಿರುಚಲಾಗಿದೆ, ಶಕ್ತಿ ಯೋಜನೆ ನಿಲ್ಲಿಸುತ್ತೇವೆ ಎಂದು ನಾನು ಹೇಳಿಲ್ಲ. ಮಹಿಳೆಯರು ಈ ರೀತಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದೆ ಅಷ್ಟೇ. ಮಲ್ಲಿಕಾರ್ಜುನ ಖರ್ಗೆ ನನಗೆ ಹೇಳಿದ್ದಲ್ಲ, ಕಾರ್ಯಕರ್ತರಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ ಅಷ್ಟೇ ಎಂದರು.

ಡಿಸಿಎಂ ಡಿಕೆಶಿ ಮೊದಲು ಹೇಳಿದ್ದೇನು..?

ರಾಜ್ಯ ಸಾರಿಗೆ ಸಂಸ್ಥೆಯು ಖಾಸಗಿ ಸಂಸ್ಥೆಗಳನ್ನೂ ಮೀರಿಸಬಲ್ಲ ಗುಣಮಟ್ಟದ ಸೇವೆಗಳನ್ನು ನೀಡುತ್ತಿದೆ. ನಾವು ಶಕ್ತಿ ಯೋಜನೆಯ ಮೂಲಕ ಹೆಣ್ಣುಮಕ್ಕಳು ಉಚಿತವಾಗಿ ಬಸ್ನಲ್ಲಿ ಪ್ರಯಾಣ ಮಾಡುವ ಅವಕಾಶ ಕಲ್ಪಿಸಿದೆವು. ಹಣಕಾಸಿನ ಪರಿಸ್ಥಿತಿ ಚೆನ್ನಾಗಿರುವ ಕೆಲವು ಮಹಿಳೆಯರು ನನ್ನನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದು, ತಾವು ಹಣ ಕೊಟ್ಟು ಪ್ರಯಾಣ ಮಾಡಲು ಬಯಸಿದರೂ ಕಂಡಕ್ಟರ್ಗಳು ಸ್ವೀಕರಿಸುತ್ತಿಲ್ಲ ಎಂದು ಹೇಳುತ್ತಿದ್ದಾರೆ. ನಮಗೆ ಉಚಿತ ಪ್ರಯಾಣ ಬೇಡ ಎಂದು ಮೆಸೇಜ್ ಹಾಕಿದ್ದಾರೆ. ನಾವು ಟಿಕೆಟ್ಗೆ ದುಡ್ಡು ಕೊಡುತ್ತೇವೆ ಆದರೆ ಬಸ್ನಲ್ಲಿ ಹಣ ತೆಗೆದುಕೊಳ್ಳುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಈ ಕುರಿತು ಸಚಿವ ರಾಮಲಿಂಗಾ ರೆಡ್ಡಿ ಜೊತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read