HomeKarnatakaಬಿಜೆಪಿ ಕಾರ್ಯಕರ್ತನ ಆತ್ಮಹತ್ಯೆ ಪ್ರಕರಣ : ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಬಿಜೆಪಿ ಕಾರ್ಯಕರ್ತನ ಆತ್ಮಹತ್ಯೆ ಪ್ರಕರಣ : ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಬೆಂಗಳೂರು : ಆತ್ಮಹತ್ಯೆ ಮಾಡಿಕೊಂಡವರು ಯಾರೆಂದು ನನಗೆ ಗೊತ್ತಿಲ್ಲ ಎಂದು ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ.

ಸಚಿವ ಡಾ.ಶರಣಪ್ರಕಾಶ್ ಹೆಸರು ಹೇಳಿ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಸಚಿವ ಡಾ.ಶರಣಪ್ರಕಾಶ್ ಪ್ರತಿಕ್ರಿಯೆ ನೀಡಿದ್ದಾರೆ.

‘ಆ ವ್ಯಕ್ತಿ ಯಾರಂತ ನನಗೆ ಗೊತ್ತಿಲ್ಲ, ಇದೇ ಮೊದಲ ಬಾರಿಗೆ ನೋಡಿರುವುದು. ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಯಾರೆಂದು ನನಗೆ ಗೊತ್ತಿಲ್ಲ. ಆತ ಯಾಕೆ ನನ್ನ ಹೆಸರು ಹೇಳಿದ್ದಾನೆ. ಈ ಬಗ್ಗೆ ಮಾಹಿತಿ ಪಡೆಯುತ್ತೇನೆ ಎಂದು ಸಚಿವರು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಶಿರೋಹಳ್ಳಿ ಗ್ರಾಮದ ಬಿಜೆಪಿ ಕಾರ್ಯಕರ್ತ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಿರೋಹಳ್ಳಿ ಗ್ರಾಮದ ಶಿವಕುಮಾರ್ ಎಂಬ ಬಿಜೆಪಿ ಕಾರ್ಯಕರ್ತ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾನು ಹಿಂದೂ ಹುಲಿ, ಹಿಂದೂವಾಗಿ ಸಾಯುತ್ತೇನೆ. ಸಚಿವ ಶರಣಪ್ರಕಾಶ್ ಪಾಟೀಲ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ನನ್ನ ಸಾವಿಗೆ ಕಾರಣ ಎಂದು ಆಡಿಯೋ ರೆಕಾರ್ಡ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular