ಮೈಸೂರು:ರಾಜಕೀಯ ಟೀಕೆಗಳಿಗೆ ನಾನು ತಲೆಕೆಡಿಸಿಕೊಳ್ಳಲ್ಲ ಎಂದು ವಿಪಕ್ಷಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ .
ಮೈಸೂರಿನ ಕಾಗಿನೆಲೆ ಮಹಾಸಂಸ್ಥಾನ ಮಠದ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಐಟಿ ದಾಳಿ ಸೇರಿದಂತೆ ಹಲವು ವಿಚಾರಗಳಿಗೆ ರಾಜ್ಯ ಸರ್ಕಾರವನ್ನು ಟೀಕೆ ಮಾಡುತ್ತಿರುವ ವಿಪಕ್ಷಗಳಿಗೆ ಉತ್ತರ ನೀಡಿದ್ದಾರೆ.
ಮಾತನಾಡಿದ್ದಾರೆ. 2005ರಲ್ಲಿ ದೇವೇಗೌಡರು ಜೆಡಿಎಸ್ನಿಂದ ಉಚ್ಚಾಟನೆ ಮಾಡಿದರು. ಬಳಿಕ ನಾನು ಅನಿವಾರ್ಯವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರಬೇಕಾಯ್ತು ಎಂದರು.
ನಾನು ಜಾತ್ಯತೀತವಾಗಿ ಕೆಲಸ ಮಾಡುತ್ತೇನೆ. ಎಲ್ಲಾ ಸಮುದಾಯಕ್ಕೂ ನಾನು ಗೌರವ ಕೊಡುತ್ತೇನೆ. ರಾಜಕೀಯ ಟೀಕೆಗಳಿಗೆ ನಾನು ತಲೆಕೆಡಿಸಿಕೊಳ್ಳಲ್ಲ, ನೊಂದ ಸಮುದಾಯಕ್ಕೆ ನ್ಯಾಯ ಕೊಡಲು ಪ್ರಯತ್ನ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ .
ಸಿಎಂ ವಿರುದ್ಧ ಬಿಜೆಪಿ ಪೋಸ್ಟ್ ವಾರ್
ಸಮಗ್ರ ಭ್ರಷ್ಟಾಚಾರಕ್ಕಾಗಿ ವಿಧಾನಸೌಧವನ್ನು ಭ್ರಷ್ಟಾಚಾರದ ಹೆಡ್ ಆಫೀಸ್ ಮಾಡಿಕೊಂಡು ಪಂಚರಾಜ್ಯ ಚುನಾವಣೆಗೆ ಭರಪೂರ ಫಂಡಿಂಗ್ ಮಾಡುವ ಹೊಣೆ ಹೊತ್ತಿರುವ ಕರ್ನಾಟಕದ ಕಲೆಕ್ಷನ್ ಮಾಸ್ಟರ್ಸ್ ಇವರೇ…ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಸಮಗ್ರ ಭ್ರಷ್ಟಾಚಾರಕ್ಕಾಗಿ ವಿಧಾನಸೌಧವನ್ನು ಭ್ರಷ್ಟಾಚಾರದ ಹೆಡ್ ಆಫೀಸ್ ಮಾಡಿಕೊಂಡು ಪಂಚರಾಜ್ಯ ಚುನಾವಣೆಗೆ ಭರಪೂರ ಫಂಡಿಂಗ್ ಮಾಡುವ ಹೊಣೆ ಹೊತ್ತಿರುವ ಕರ್ನಾಟಕದ ಕಲೆಕ್ಷನ್ ಮಾಸ್ಟರ್ಸ್ ಇವರೇ…#CongressLootsKarnataka #EightyPercentSarkara #ATMSarkara pic.twitter.com/226nqL9Kk0
— BJP Karnataka (@BJP4Karnataka) October 16, 2023