ರಾಮನಗರ: ನನಗೆ ಸಚಿವ ಸ್ಥಾನ ಬೇಡ, ಡಿಸಿಎಂ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂದು ಕಾಂಗ್ರೆಸ್ ಶಾಸಕ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ.
ಬೆಂಗಳೂರು ದಕ್ಷಿಣ ಜಿಲ್ಲೆ ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಅಧಿಕಾರದ ಒಡಂಬಡಿಕೆ ವಿಚಾರ ನನಗೆ ಗೊತ್ತಿಲ್ಲ. ನಾನು ಕಾಂಗ್ರೆಸ್ ಸರ್ಕಾರದಲ್ಲಿ ಶಾಸಕನಾಗಿ ಆರು ತಿಂಗಳಾಗಿದೆ. ಕಾಂಗ್ರೆಸ್ ನಲ್ಲಿ ನಾನು ಬಹಳ ಸಕ್ರಿಯವಾಗಿ ಓಡಾಡುತ್ತಿಲ್ಲ. ನನಗೆ ಮಂತ್ರಿ ಸ್ಥಾನದ ಆಸಕ್ತಿ ಇಲ್ಲ. ಮೊದಲು ಡಿ.ಕೆ. ಶಿವಕುಮಾರ್ ಗೆ ಮುಖ್ಯಮಂತ್ರಿ ಸ್ಥಾನ ಸಿಗಲು ಬೆಂಬಲ ನೀಡುತ್ತೇನೆ ಎಂದು ಹೇಳಿದ್ದಾರೆ.
ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಲಿ ಎಂಬುದು ಜಿಲ್ಲೆಯ ಶಾಸಕರ ಬಯಕೆಯಾಗಿದೆ. ಈ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡಲಿದೆ ಎಂದು ಹೇಳಿದ್ದಾರೆ.
ಸಿದ್ಧರಾಮಯ್ಯ ರಾಷ್ಟ್ರರಾಜಕಾರಣಕ್ಕೆ ಹೋಗುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಯೋಗೇಶ್ವರ್, ಕಾಂಗ್ರೆಸ್ ಬೆಳವಣಿಗೆ ಬಗ್ಗೆ ಸೀರಿಯಸ್ ಆಗಿ ಫಾಲೋ ಮಾಡುತ್ತಿಲ್ಲ. ಯಾರು ಏನು ಆಗುತಿದ್ದಾರೆ, ಏನು ಆಗುತ್ತಿದೆ ಎನ್ನುವ ಮಾಹಿತಿ ಇಲ್ಲ. ಸದ್ಯಕ್ಕೆ ನಾನು ಸಕ್ರಿಯವಾಗಿಲ್ಲ ಎಂದಿದ್ದಾರೆ.