
ಇದರ ಮಧ್ಯೆ ಮೇಘಾಲಯ ಬಿಜೆಪಿ ರಾಜ್ಯಾಧ್ಯಕ್ಷ ಅರ್ನೆಸ್ಟ್ ಮಾವೈರ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಮೇಘಾಲಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಮಧ್ಯೆ ಅವರು ಈ ಹೇಳಿಕೆ ನೀಡಿರುವುದು ಕುತೂಹಲಕಾರಿಯಾಗಿದೆ.
ಮಾಧ್ಯಮ ಸಂದರ್ಶನ ಒಂದರಲ್ಲಿ ಮಾತನಾಡಿರುವ ಅವರು, ನಾನು ಗೋಮಾಂಸ ತಿನ್ನುತ್ತೇನೆ. ಅದರಲ್ಲಿ ಏನೂ ತಪ್ಪಿಲ್ಲ. ಅಲ್ಲದೆ ಬಿಜೆಪಿ ಗೋಮಾಂಸ ಭಕ್ಷಣೆ ಮೇಲೆ ಯಾವುದೇ ನಿರ್ಬಂಧ ಹೇರಿಲ್ಲ ಎಂದಿದ್ದಾರೆ.

