HomeLatest News'ಪಕ್ಷಕ್ಕಿಂತ ಯಾರು ದೊಡ್ಡವರಲ್ಲ ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ನನ್ನ ಪೂರ್ಣ ಸಹಮತವಿದೆ' : CM...

‘ಪಕ್ಷಕ್ಕಿಂತ ಯಾರು ದೊಡ್ಡವರಲ್ಲ ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ನನ್ನ ಪೂರ್ಣ ಸಹಮತವಿದೆ’ : CM ಸಿದ್ದರಾಮಯ್ಯ

ಬೆಂಗಳೂರು :   ಪಕ್ಷಕ್ಕಿಂತ ಯಾರು ದೊಡ್ಡವರಲ್ಲ ಎಂಬ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ನನ್ನ‌ ಪೂರ್ಣ ಸಹಮತವಿದೆ. ಯಾರು ಪಕ್ಷಕ್ಕಿಂತ ದೊಡ್ಡವರಾಗಲು ಸಾಧ್ಯವೇ ಇಲ್ಲ. ನಾಯಕತ್ವ ಬದಲಾವಣೆ ವಿಚಾರವನ್ನು ರಾಹುಲ್ ಗಾಂಧಿಯವರು ತೀರ್ಮಾನಿಸಬೇಕು. ಅವರು ಏನು ತೀರ್ಮಾನಿಸುತ್ತಾರೋ ಅದಕ್ಕೆ ನಾವು ಬದ್ಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

 ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು.

ನಾನು ಈ ಬಗ್ಗೆ ಪಕ್ಷದ ವರಿಷ್ಠರ ಬಳಿ ಮಾತನಾಡಿದ್ದು, ನಾವು ಈ ಬಗ್ಗೆ ತೀರ್ಮಾನಿಸುತ್ತೇವೆ ಎಂದು ಹೇಳಿದ್ದಾರೆ. ಅವರ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಿದ್ದೇವೆ. ಮಾಧ್ಯಮದವರೇ ನಾಯಕತ್ವ ಬದಲಾವಣೆಯ ಬಗ್ಗೆ ಹೆಚ್ಚಾಗಿ ಚರ್ಚಿಸುತ್ತಿದ್ದಾರೆ. ಇಷ್ಟೊಂದು ಪ್ರಶ್ನೆ ಕೇಳಬೇಕಾದ ಅಗತ್ಯ ಏನಿದೆ? ವಿಧಾನಸಭೆಯಲ್ಲಿ ಈ ಬಗ್ಗೆ ಹೇಳಿದ ಮೇಲೂ ಪುನಃ ಚರ್ಚೆ ಮಾಡುವ ಅಗತ್ಯವೇ ಇಲ್ಲ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆ.ಎನ್.ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಮಾಡಿದ್ದು ಎಸ್.ಎಂ.ಕೃಷ್ಣನವರ ಸರ್ಕಾರ. ಅಧಿಕಾರದಲ್ಲಿದ್ದಾಗ ನಾನು ಮಾಡಿದೆ, ಅವರು ಮಾಡಿದರು ಎನ್ನುವುದು ಮುಖ್ಯವಲ್ಲ. ಆದರ ಪ್ರಶ್ನೆಯೇ ಇಲ್ಲ. ಎಸ್.ಎಂ.ಕೃಷ್ಣ ಅವರು ಆಗ ಮುಖ್ಯಮಂತ್ರಿಗಳಿದ್ದರು, ಅವರ ಸರ್ಕಾರ ಮಾಡಿತ್ತು ಎಂದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular