ಬೆಂಗಳೂರು : ನಾನು ಚಾಮರಾಜನಗರಕ್ಕೆ 20 ಬಾರಿ ಬಂದಿದ್ದೇನೆ , ಎರಡನೇ ಬಾರಿ ಮುಖ್ಯಮಂತ್ರಿ ಆಗಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ನಿನ್ನೆ ನಡೆದ ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಮಹದೇಶ್ವರ ಬೆಟ್ಟದಲ್ಲಿ ಶುಚಿತ್ವ, ಮದ್ಯಪಾನ ನಿಷೇಧ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ. ಮೈಸೂರು ವಿಭಾಗದ ಚಾಮರಾಜನಗರ ಜಿಲ್ಲೆ ಹಿಂದುಳಿದ ಜಿಲ್ಲೆಯಾಗಿದ್ದು, ಈ ಭಾಗಕ್ಕೆ ವಿಶೇಷ ಗಮನ ನೀಡುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿದೆ.
ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬುದು ಸತ್ಯಕ್ಕೆ ದೂರವಾದ ಮಾತು. ಇಂತಹ ಮೌಢ್ಯಗಳೇ ಸಮಾಜದ ಪ್ರಗತಿಗೆ ಮಾರಕವಾಗಿದೆ. ನಾನು ಇದುವರೆಗೆ ಸುಮಾರು 20 ಬಾರಿ ಜಿಲ್ಲೆಗೆ ಬಂದಿದ್ದು, ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಿನ್ನೆ ನಡೆಸಲಾಗಿದೆ. ಈ ಪ್ರದೇಶದಲ್ಲಿ ಶುಚಿತ್ವ ಕಾಯ್ದುಕೊಳ್ಳಬೇಕು, ಮದ್ಯಪಾನ ನಿಷೇಧವಾಗಬೇಕು, ದೇವಸ್ಥಾನದಿಂದ ವಿತರಿಸಲಾಗುವ ಲಾಡು ಪ್ರಸಾದವನ್ನು ಗುಣಮಟ್ಟದಲ್ಲಿ ಹಾಗೂ ಕಡಿಮೆ ದರದಲ್ಲಿ ನೀಡುವ ಬಗ್ಗೆ ಕ್ರಮ ಕೈಗೊಳ್ಳಬೇಕು. ಮಲೈಮಹದೇಶ್ವರ ಸನ್ನಿಧಿಯ ಸುತ್ತಮುತ್ತಲ ಪ್ರದೇಶದಲ್ಲಿ ಮೂಲಸೌಕರ್ಯ ಅಭಿವೃದ್ಧಿಪಡಿಸಬೇಕೆಂದು ನಿರ್ಣಯಿಸಲಾಗಿದೆ. – ಮಲೆಮಹದೇಶ್ವರ ಬೆಟ್ಟದ ಸಮೀಪ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ನನ್ನ ಪ್ರತಿಕ್ರಿಯೆ ಎಂದರು.

