HomeLatest Newsನಾನು ರಾಜೀನಾಮೆ ನೀಡಿಲ್ಲ, ಆ ಪ್ರಶ್ನೆಯೇ ಉದ್ಭವಿಸಿಲ್ಲ: ಸಚಿವ ಜಾರ್ಜ್ ಸ್ಪಷ್ಟನೆ

ನಾನು ರಾಜೀನಾಮೆ ನೀಡಿಲ್ಲ, ಆ ಪ್ರಶ್ನೆಯೇ ಉದ್ಭವಿಸಿಲ್ಲ: ಸಚಿವ ಜಾರ್ಜ್ ಸ್ಪಷ್ಟನೆ

ಬೆಂಗಳೂರು: ನಾನು ರಾಜೀನಾಮೆ ನೀಡಿಲ್ಲ, ರಾಜೀನಾಮೆ ನೀಡುವ ಪ್ರಶ್ನೆಗೆ ಉದ್ಭವವಾಗಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಸ್ಪಷ್ಟಪಡಿಸಿದ್ದಾರೆ.

ರಾಜೀನಾಮೆ ಕುರಿತಾದ ವದಂತಿ ಬಗ್ಗೆ ಮಾತನಾಡಿದ ಅವರು, ನಾನು ರಾಜೀನಾಮೆ ನೀಡಿಲ್ಲ. ಅಂತಹ ಪ್ರಶ್ನೆ ಉದ್ಭವವಾಗಿಲ್ಲ ಎಂದು ತಿಳಿಸಿದ್ದಾರೆ.

ಕಲಾಪದ ವೇಳೆ ಶಾಸಕ ಸುನಿಲ್ ಕುಮಾರ್, ಜಾರ್ಜ್ ರಾಜೀನಾಮೆ ಕೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಸದನದಲ್ಲಿಯೇ ಸಚಿವರು ಇದ್ದಾರೆ. ಸಿಎಂ ಪುತ್ರನ ಹಸ್ತಕ್ಷೇಪ ಜಾಸ್ತಿಯಾಗಿದೆ ಎಂದು ಜಾರ್ಜ್ ರಾಜೀನಾಮೆ ನೀಡಿದ್ದಾರೆ ಎಂದು ಮಾಧ್ಯಮಗಳಲ್ಲಿ ಬಂದಿದೆ. ಈ ಬಗ್ಗೆ ಸ್ಪಷ್ಟನೆ ಕೊಡಿ ಎಂದು ಆಗ್ರಹಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಕುರಿತು ಪ್ರತಿಕ್ರಿಯೆ ನೀಡಿದ ಜಾರ್ಜ್, ನಾನು ರಾಜೀನಾಮೆ ನೀಡಿಲ್ಲ. ಟಿವಿಯವರಿಗೆ ನಾನು ರಾಜೀನಾಮೆ ಕೊಟ್ಟಿದ್ದೇನೆ ಎಂದು ಯಾರು ಹೇಳಿದ್ದಾರೆ? ಸುನಿಲ್ ಕುಮಾರ್ ಅವರೇ ಇದನ್ನು ಸೃಷ್ಟಿ ಮಾಡಿದ್ದಾರೆ. ಅಂತಹ ಪ್ರಶ್ನೆ ಉದ್ಭವವಾಗಿಲ್ಲ. ನನಗೆ ಗೊತ್ತಿಲ್ಲದ ವಿಚಾರವಿದು. ಮುಖ್ಯಮಂತ್ರಿಗಳ ಜೊತೆಗೆ ನಾವೆಲ್ಲ ವಿಶ್ವಾಸದಿಂದ ಇದ್ದೇವೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular