ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ (ಮೇ 28, 2026) ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರು ಪ್ರಸ್ತುತ ಬೆಂಗಳೂರಿನಲ್ಲಿ ಇಲ್ಲದ ಕಾರಣ, ಸಿದ್ದರಾಮಯ್ಯ ಅವರು ಲೋಕಭವನಕ್ಕೆ ತೆರಳಿ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.
ರಾಜ್ಯಪಾಲರು ಪ್ರವಾಸದಲ್ಲಿದ್ದು, ರಾತ್ರಿ ವಾಪಸ್ಸಾಗಲಿದ್ದಾರೆ. ಅವರು ವಾಪಸ್ಸಾದ ನಂತರ ರಾಜೀನಾಮೆ ಪತ್ರವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಿದ್ದಾರೆ ಎಂದು ರಾಜ್ಯಪಾಲರ ಕಚೇರಿಯ ಮೂಲಗಳು ತಿಳಿಸಿವೆ.
ಸಿಎಂ ಸ್ಪಷ್ಟನೆ: ರಾಜೀನಾಮೆಗೂ ಮುನ್ನ ಮಾತನಾಡಿದ ಸಿದ್ದರಾಮಯ್ಯ, “ಹೈಕಮಾಂಡ್ ಸೂಚನೆಯಂತೆ ನಾನು ರಾಜೀನಾಮೆ ನೀಡುತ್ತಿದ್ದೇನೆ. 48 ಗಂಟೆಗಳ ಒಳಗೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದೆ, ಅದರಂತೆ ಇಂದು ಸಲ್ಲಿಸಿದ್ದೇನೆ,” ಎಂದು ಸ್ಪಷ್ಟಪಡಿಸಿದ್ದಾರೆ.ರಾಜ್ಯಪಾಲರು ವಾಪಸ್ಸಾದ ಬಳಿಕ ತಮ್ಮ ರಾಜೀನಾಮೆ ಪತ್ರವನ್ನು ಅಂಗೀಕರಿಸುತ್ತಾರೆ ಎಂಬ ವಿಶ್ವಾಸವನ್ನು ಸಿದ್ದರಾಮಯ್ಯ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರು ಸಂವಿಧಾನದ ಪ್ರಕಾರ ರಾಜೀನಾಮೆಯನ್ನು ಅಂಗೀಕರಿಸಬೇಕು ಎಂದರು. ಮತದಾರರು ನಮ್ಮ ಅಭಿಮಾನಿ ದೇವರು. ಕರ್ನಾಟಕದ 7 ಕೋಟಿ ಜನರ ಸೇವೆ ಮಾಡುವ ಅವಕಾಶ ಸಿಕ್ಕಿದೆ ನನಗೆ ಸಿಕ್ಕಿದೆ ಎಂದರು. ನಾನು ರಾಜಕಾರಣಿ, ಸಂವಿಧಾನವೇ ಧರ್ಮ ಎನ್ನುವನು. ಅವಕಾಶ ಕೊಟ್ಟ ಸೋನಿಯಾ ಗಾಂಧಿ ಅವರಿಗೆ ಧನ್ಯವಾದಗಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜೀನಾಮೆಗೆ ಮುನ್ನ ಸಿಎಂ ನಿವಾಸ ‘ಕಾವೇರಿ’ಯಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ಉಪಾಹಾರ ಸಭೆ ನಡೆಸಿದ ಸಿದ್ದರಾಮಯ್ಯ, ತಮ್ಮ ನಿರ್ಧಾರವನ್ನು ಪ್ರಕಟಿಸಿ ಸಹೋದ್ಯೋಗಿಗಳಿಗೆ ಧನ್ಯವಾದ ತಿಳಿಸಿದರು.ಈ ಬೆಳವಣಿಗೆಯು ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಪ್ರಕ್ರಿಯೆಯನ್ನು ಅಧಿಕೃತಗೊಳಿಸಿದೆ. ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆಗಳು ದಟ್ಟವಾಗಿವೆ.

