HomeIndiaಚುನಾವಣೆ ಹೊತ್ತಲ್ಲೇ ತೆಲಂಗಾಣ ಸಚಿವೆ ಸಬಿತಾ ರೆಡ್ಡಿಗೆ ಶಾಕ್: ಸಂಬಂಧಿಕರ ಮನೆ ಮೇಲೆ ಐಟಿ ದಾಳಿ

ಚುನಾವಣೆ ಹೊತ್ತಲ್ಲೇ ತೆಲಂಗಾಣ ಸಚಿವೆ ಸಬಿತಾ ರೆಡ್ಡಿಗೆ ಶಾಕ್: ಸಂಬಂಧಿಕರ ಮನೆ ಮೇಲೆ ಐಟಿ ದಾಳಿ

ಹೈದರಾಬಾದ್: ತೆಲಂಗಾಣ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಹೈದರಾಬಾದ್‌ ನಲ್ಲಿರುವ ತೆಲಂಗಾಣ ಸಚಿವೆ ಸಬಿತಾ ಇಂದ್ರ ರೆಡ್ಡಿ ಅವರ ಸಂಬಂಧಿಕರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸೋಮವಾರ ಶೋಧ ನಡೆಸಿದ್ದಾರೆ.

ಗಚ್ಚಿಬೌಲಿಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿರುವ ಪ್ರದೀಪ್ ಅವರ ನಿವಾಸದಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಪ್ರದೀಪ್ ಸಚಿವರ ಹತ್ತಿರದ ಸಂಬಂಧಿ. ರೆಡ್ಡಿ ಅವರ ಇತರ ಸಂಬಂಧಿಕರ ನಿವಾಸಗಳಲ್ಲೂ ಐಟಿ ಶೋಧ ನಡೆಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಧಿಕಾರಿಗಳು ಪ್ರಸ್ತುತ ಹೈದರಾಬಾದ್‌ನ ಪ್ರಮುಖ ಔಷಧೀಯ ಕಂಪನಿಯ ಮೇಲೆ ದಾಳಿ ನಡೆಸುತ್ತಿದ್ದಾರೆ, ನಗರದಾದ್ಯಂತ 15 ವಿವಿಧ ಸ್ಥಳಗಳಲ್ಲಿ ಏಕಕಾಲದಲ್ಲಿ ಹುಡುಕಾಟ ನಡೆಸಲಾಗುತ್ತಿದೆ.

ಫಾರ್ಮಾ ಕಂಪನಿ ಮಾಲೀಕರ ಮನೆ, ಸಿಬ್ಬಂದಿ ಕಚೇರಿಗಳಲ್ಲಿ ಶೋಧ ನಡೆಸಲಾಗುತ್ತಿದೆ. ಕೋಟ್ಲಾ ನರೇಂದ್ರ ರೆಡ್ಡಿ ಅವರು ಡಾ.ರೆಡ್ಡಿ ಲ್ಯಾಬ್‌ನಲ್ಲಿ ಮಾರ್ಕೆಟಿಂಗ್ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular