‘ತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡುತ್ತಿದ್ದೆ’ : ಪೊಲೀಸ್ ವಿಚಾರಣೆ ವೇಳೆ ಕರಾಳ ಸತ್ಯ ಬಾಯ್ಬಿಟ್ಟ ‘ನರ್ಸ್ ಮಂಜುಳ’

ಬೆಂಗಳೂರು : ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿ ನರ್ಸ್ ಮಂಜುಳಾನನ್ನು ಪೊಲೀಸರು ಬಂಧಿಸಿದ್ದು, ಬಂಧಿತರ ಸಂಖ್ಯೆ 10 ಕ್ಕೆ ಏರಿಕೆ.

ಪೊಲೀಸ್ ವಿಚಾರಣೆ ವೇಳೆ ಈಕೆ ಸ್ಪೋಟಕ ಹೇಳಿಕೆ ನೀಡಿದ್ದು, ತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡುತ್ತಿದ್ದೆ ಬಾಯ್ಬಿಟ್ಟಿದ್ದಾಳೆ.

ಕಳೆದ 1 ವರ್ಷದಿಂದ ನಾನು ಚಂದನ್ ಬಲ್ಲಾಳ್ ಬಳಿ ಕೆಲಸ ಮಾಡುತ್ತಿದ್ದೆ, ತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡಿದ್ದೇನೆ. 5-6 ನಿಮಿಷಕ್ಕೆ ಮಗು ಸಾಯುತ್ತಿತ್ತು . ತಾಯಿಗೆ ಪ್ರಜ್ಞೆ ಇಲ್ಲದಂತೆ ಮಾಡಿ ಸಿ ಸೆಕ್ಷನ್ ಮಾಡಲಾಗುತ್ತಿತ್ತು ಎಂದು ಭಯಾನಕ ಸತ್ಯ ಬಿಚ್ಚಿಟ್ಟಿದ್ದಾಳೆ.6 ತಿಂಗಳ ಮಗುವಿಗೆ ಧ್ವನಿ ಇರುವುದಿಲ್ಲ. ಮಗು ಹೊರಗೆ ತೆಗೆದ 5ರಿಂದ 10 ನಿಮಿಷದಲ್ಲಿ ಸಾಯುತ್ತಿದ್ದವು. ನಂತರ ಅದನ್ನು ಪೇಪರ್ ನಲ್ಲಿ ಸುತ್ತಿ ನದಿಗೆ ಎಸೆಯಲಾಗುತ್ತಿತ್ತು ಎಂದು ಪೊಲೀಸರ ಬಳಿ ತಪ್ಪೊಪ್ಪಿಕೊಂಡಿದ್ದಾಳೆ.  12 ವಾರ ಕಳೆದ ಮಕ್ಕಳನ್ನು ಅಬಾರ್ಟ್ ಮಾಡಿ ಮೆಡಿಕಲ್ ವೇಸ್ಟ್ಗೆ ಹಾಕುತ್ತಿದ್ದೆವು. 4 ದಿನಕ್ಕೆ ಮೆಡಿಕಲ್ ವೇಸ್ಟ್ ಅಲ್ಲಿ ಮಗು ಕೊಳೆತು ಹೋಗುತ್ತಿತ್ತು ಎಂದು ನರ್ಸ್ ಮಂಜುಳಾ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾಳೆ.

 

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read