ದೆಹಲಿ ಮಹಿಳಾ ಆಯೋಗದ(ಡಿಸಿಡಬ್ಲ್ಯು) ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರು ತಮ್ಮ ಬಾಲ್ಯದಲ್ಲಿ ಅನುಭವಿಸಿದ ಲೈಂಗಿಕ ಕಿರುಕುಳದ ಬಗ್ಗೆ ಹೇಳಿಕೊಂಡಿದ್ದಾರೆ.
“ನಾನು ಬಾಲ್ಯದಲ್ಲಿ ನನ್ನ ತಂದೆಯಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದೆ, ಅವರು ನನ್ನನ್ನು ಹೊಡೆಯುತ್ತಿದ್ದರು. ನಾನು ಹಾಸಿಗೆಯ ಕೆಳಗೆ ಅಡಗಿಕೊಳ್ಳುತ್ತಿದ್ದೆ” ಎಂದು ಹೇಳಿದ್ದಾರೆ.
ಇತ್ತೀಚಿನ ಸರ್ಕಾರಿ ಅಪರಾಧದ ಮಾಹಿತಿಯ ಪ್ರಕಾರ, ಭಾರತವು 2021 ರಲ್ಲಿ 31,677 ಅತ್ಯಾಚಾರ ಅಪರಾಧಗಳನ್ನು ದಾಖಲಿಸಿದೆ, ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋದ(NCRB) ‘ಕ್ರೈಮ್ ಇನ್ ಇಂಡಿಯಾ 2021’ ವರದಿಯ ಪ್ರಕಾರ, 2019 ರಲ್ಲಿ 32,033 ಗೆ ಹೋಲಿಸಿದರೆ 2020 ರಲ್ಲಿ 28,046 ಅತ್ಯಾಚಾರ ಪ್ರಕರಣಗಳು ನಡೆದಿವೆ.
#WATCH | "I was sexually assaulted by my father when I was a child. He used to beat me up, I used to hide under the bed," DCW chief Swati Maliwal expresses her ordeal alleging her father sexually assaulted her during childhood pic.twitter.com/GsUqKDh2w8
— ANI (@ANI) March 11, 2023

