HomeKarnataka'ಮಹಿಳಾ ಮೀಸಲಾತಿ ಮಸೂದೆ ಮಂಡನೆ'ಯನ್ನು ನಾನು ಮುಕ್ತವಾಗಿ ಸ್ವಾಗತಿಸುತ್ತೇನೆ : ಮಾಜಿ ಸಿಎಂ HDK

‘ಮಹಿಳಾ ಮೀಸಲಾತಿ ಮಸೂದೆ ಮಂಡನೆ’ಯನ್ನು ನಾನು ಮುಕ್ತವಾಗಿ ಸ್ವಾಗತಿಸುತ್ತೇನೆ : ಮಾಜಿ ಸಿಎಂ HDK

ಬೆಂಗಳೂರು : ಮಹಿಳಾ ಮೀಸಲಾತಿ ಮಸೂದೆ ಮಂಡನೆಯನ್ನು ನಾನು ಮುಕ್ತವಾಗಿ ಸ್ವಾಗತಿಸುತ್ತೇನೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಮಸೂದೆ ಲೋಕಸಭೆಯಲ್ಲಿ ಮಂಡನೆ ಆಗುತ್ತಿರುವುದನ್ನು ನಾನು ಮುಕ್ತವಾಗಿ ಸ್ವಾಗತಿಸುತ್ತೇನೆ. ದೇವೇಗೌಡ ಅವರು ಪ್ರಧಾನಮಂತ್ರಿಗಳಾಗಿದ್ದ ಸಂದರ್ಭದಲ್ಲಿಯೇ 1996 ಸೆಪ್ಟೆಂಬರ್ 12ರಂದು ರಾಜ್ಯಸಭೆಯಲ್ಲಿ ಈ ಐತಿಹಾಸಿಕ ಬಿಲ್ ಅನ್ನು ಮಂಡಿಸಲಾಗಿತ್ತು. ಆದರೆ, ಅವರ ಸಂಯುಕ್ತರಂಗ ಸರಕಾರದ ಮೈತ್ರಿಕೂಟದ ಕೆಲ ಮಿತ್ರಪಕ್ಷಗಳೇ ತೀವ್ರ ವಿರೋಧ ವ್ಯಕ್ತಪಡಿಸಿದ ಕಾರಣಕ್ಕೆ ಆ ಮಸೂದೆ ಅಂಗೀಕಾರ ಆಗಲಿಲ್ಲ. ಇವತ್ತು ಕಾಂಗ್ರೆಸ್ಸಿನ I.N.D.I.A. ಮೈತ್ರಿಕೂಟವನ್ನು ಸೇರಿಕೊಂಡಿರುವ ನಾಯಕರೇ ಅಂದು ಈ ಮಸೂದೆಗೆ ತಡೆ ಒಡ್ಡಿದ್ದರು. 27 ವರ್ಷಗಳ ನಂತರ ಮಾನ್ಯ ದೇವೇಗೌಡರ ಕನಸಿಗೆ ಮರುಜೀವ ಬಂದಿರುವುದು ನನಗೆ ಸಂತೋಷ ಉಂಟು ಮಾಡಿದೆ.

1995ರಲ್ಲಿ ಮಾನ್ಯ ದೇವೇಗೌಡರು ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದಾಗ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲು ನೀಡಿ, ಅಧಿಕಾರ ನಡೆಸುವ ಹಕ್ಕು ಕಲ್ಪಿಸಿ ಮಹಿಳಾ ಸಬಲೀಕರಣದ ಸುವರ್ಣ ಅಧ್ಯಾಯಕ್ಕೆ ನಾಂದಿ ಹಾಡಿದ್ದರು. ಅಂದು ನಮ್ಮ ರಾಜ್ಯದಲ್ಲಿ ಘಟಿಸಿದ ಈ ಕ್ರಾಂತಿಕಾರಿ ವಿದ್ಯಮಾನವನ್ನು ಇಡೀ ದೇಶವೇ ಬೆರಗು ಕಂಗಳಿಂದ ನೋಡಿತ್ತು. ಇಂದು ಮಹಿಳಾ ಮೀಸಲು ಮಸೂದೆ ಲೋಕಸಭೆಯಲ್ಲಿ ಅಂಗೀಕಾರ ಆಗುವುದು ಖಚಿತವಾಗಿದ್ದು, ಈ ಮೂಲಕ ಮಾಜಿ ಪ್ರಧಾನಿಗಳ ಕನಸು ನನಸಾಗುತ್ತಿದೆ. ಮಹಿಳೆಯರಿಗೆ ಸಮಾನ ಹಕ್ಕು, ಅವಕಾಶಗಳನ್ನು ಕಲ್ಪಿಸುವುದು ಇಂದಿನ ತುರ್ತು. ಪ್ರಧಾನಿಗಳಾದ ಮೋದಿ ಅವರು, ಮತ್ತವರ ಸಂಪುಟ ಕೈಗೊಂಡ ನಿರ್ಧಾರ ಶ್ಲಾಘನೀಯ. ರಾಜಕೀಯಕ್ಕೆ ಅತೀತವಾಗಿ ಈ ಮಸೂದೆಯನ್ನು ಎಲ್ಲಾ ಪಕ್ಷಗಳು ಬೆಂಬಲಿಸಬೇಕು ಎನ್ನುವುದು ನನ್ನ ಮನವಿ ಎಂದು ಟ್ವೀಟ್ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular