‘CM ಸಿದ್ದರಾಮಯ್ಯ’ರನ್ನು ಮನೆಗೆ ಕಳುಹಿಸುವ ತನಕ ಹೋರಾಟ ಮಾಡುತ್ತೇನೆ : ಬಿ.ಎಸ್ ಯಡಿಯೂರಪ್ಪ ಸವಾಲ್

ಬೆಂಗಳೂರು : ಸಿಎಂ ಸಿದ್ದರಾಮಯ್ಯರನ್ನು ಮನೆಗೆ ಕಳುಹಿಸುವ ತನಕ ಹೋರಾಟ ಮಾಡುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದರು.

ಸಿಎಂ ಸಿದ್ದರಾಮಯ್ಯನವರೇ, ನನ್ನ ಬದುಕಿನ ಕೊನೆಯುಸಿರು ಇರುವವರೆಗೆ ರಾಜಕೀಯದಲ್ಲಿದ್ದು, ನಿಮ್ಮನ್ನು ಮನೆಗೆ ಕಳುಹಿಸವರೆಗೂ ಹೋರಾಟ ಮಾಡುತ್ತೇನೆ. ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಕ್ಕೆ ರಾಜ್ಯದ ಜನರು ಬೇಸತ್ತಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಅವರೇ ನಿಮ್ಮ ಪಾಪದ ಕೊಡ ತುಂಬಿದೆ. ಇನ್ನೊಬ್ಬರ ಕುರಿತು ಹಗುರವಾಗಿ ಮಾತನಾಡುವುದು ಬಿಟ್ಟು, ಭವಿಷ್ಯದ ಬಗ್ಗೆ ಯೋಚನೆ ಮಾಡಿ ಎಂದರು.

ಮುಖ್ಯಮಂತ್ರಿಗಳ ವಿರುದ್ಧ ಹೋರಾಟ ಮುಂದುವರಿಯಲಿದೆ : ಬಿ.ವೈ ವಿಜಯೇಂದ್ರ

ಕಳೆದ ಚುನಾವಣೆ ವೇಳೆ ಪೊಳ್ಳು ಭರವಸೆ ನೀಡಿ ಅಧಿಕಾರ ಹಿಡಿದ ಕಾಂಗ್ರೆಸ್, ನಾಡಿನ ಜನರಿಗೆ ದ್ರೋಹ ಬಗೆದಿದೆ. ಕಳೆದ ಹದಿನೈದು ತಿಂಗಳಲ್ಲಿ ಅಭಿವೃದ್ಧಿ ಮರೆತ ಸಿಎಂ ಸಿದ್ದರಾಮಯ್ಯನವರ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಬಿಜೆಪಿ ಜೆಡಿಎಸ್ ಹೋರಾಟ ನಾಡಿನ ಪ್ರಗತಿ ಮರೆತ ಮುಖ್ಯಮಂತ್ರಿಗಳ ವಿರುದ್ಧ ಹೋರಾಟ ಮುಂದುವರಿಯಲಿದೆ ಎಂದು ಬಿ.ವೈ ವಿಜಯೇಂದ್ರ ಹೇಳಿದರು.

https://twitter.com/BJP4Karnataka/status/1822211163213492328

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read