`I will marry Rahul Gandhi’ : ನಾನು ರಾಹುಲ್ ಗಾಂಧಿಯನ್ನು ಮದುವೆಯಾಗುತ್ತೇನೆ..!ಬಾಲಿವುಡ್ ನಟಿಯಿಂದ ಬಿಗ್ ಆಫರ್

ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ನಾನು ಮದುವೆಯಾಗಲು ಸಿದ್ದಳಿದ್ದೇನೆ. ಆದರೆ ಮದುವೆಯಾದ್ರೆ ನಾನು ನನ್ನ ಉಪನಾಮೆಯನ್ನು ಬದಲಾಯಿಸುವುದಿಲ್ಲ ಎಂದು ಬಾಲಿವುಡ್ ನಟಿ ಶೆರ್ಲಿನ್ ಚೋಪ್ರಾ ಹೇಳಿಕೆ ನೀಡಿದ್ದು, ಸಾಕಷ್ಟು ವೈರಲ್ ಆಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ನಟಿ ಶಾರ್ಲಿನ್ ಅವರ ಹೇಳಿಕೆಗಳು ವೈರಲ್ ಆಗುವುದು ಸಾಮಾನ್ಯವಾಗಿದೆ. ಹಲವಾರು ಸಂದರ್ಭಗಳಲ್ಲಿ, ಶೆರ್ಲಿನ್ ವಿವಾದಗಳನ್ನು ಮೈಮೇಲೆ ಎಳೆದುಕೊಂಡಿದ್ದರು. ಇದೀಗ ರಾಹುಲ್ ಅವರನ್ನು ಮದುವೆಯಾಗುತ್ತೇನೆ ಎಂಬ ಹೇಳಿಕೆ ಸಾಕಷ್ಟು ವೈರಲ್ ಆಗುತ್ತಿದೆ.

ಕೆಲವು ದಿನಗಳ ಹಿಂದೆ ಹರಿಯಾಣದ ಕೆಲವು ಮಹಿಳೆಯರು ಸೋನಿಯಾ ಅವರ ನಿವಾಸಕ್ಕೆ ಬಂದಿದ್ದರು. ಆ ಸಮಯದಲ್ಲಿಯೂ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರ ವಿವಾಹದ ಬಗ್ಗೆ ಪ್ರಸ್ತಾಪವಿತ್ತು. ಇದೀಗ ರಾಹುಲ್ ಜೊತೆಗಿನ ಮದುವೆಯ ಬಗ್ಗೆ ನಟಿ ಶೆರ್ಲಿನ್ ಚೋಪ್ರಾ ಅವರ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.

ರಾಹುಲ್ ಅವರನ್ನು ಮದುವೆಯಾಗುತ್ತೀರಾ ಎಂದು ಶೆರ್ಲಿನ್ ಚೋಪ್ರಾ ಅವರನ್ನು ಕೇಳಿದಾಗ, ಅವರು ತಕ್ಷಣ ಯಾವುದೇ ಹಿಂಜರಿಕೆಯಿಲ್ಲದೆ ಹೌದು ಎಂದು ಹೇಳಿದರು. ರಾಹುಲ್ ಗಾಂಧಿಯನ್ನು ಏಕೆ ಮದುವೆಯಾಗಬಾರದು? ಅವರನ್ನು ಮದುವೆಯಾಗಲು ನಾನು ಒಪ್ಪಿಕೊಂಡಿದ್ದೇನೆ. ಆದರೆ ಒಂದು ಷರತ್ತು. ನಾನು ಮದುವೆಯ ನಂತರವೂ, ಉಪನಾಮವನ್ನು ಚೋಪ್ರಾ ಎಂದು ಹೊಂದಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.

ಸದ್ಯ ಈ ವಿಡಿಯೋ ವೈರಲ್ ಆಗಿದೆ. ವೀಡಿಯೊಗೆ ಸಂಬಂಧಿಸಿದ ಹಲವಾರು ಪೋಸ್ಟ್ಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ಶೆರ್ಲಿನ್ ಅವರ ಹೇಳಿಕೆಗೆ ಕಾಂಗ್ರೆಸ್ ಬೆಂಬಲಿಗರು ಟ್ರೋಲ್ ಮಾಡುತ್ತಿದ್ದಾರೆ. ಶೆರ್ಲಿನ್ ಅವರನ್ನು ಮದುವೆಯಾಗುವ ಮೂಲಕ ರಾಹುಲ್ ತಮ್ಮ ಜೀವನವನ್ನು ವ್ಯರ್ಥ ಮಾಡುವುದಿಲ್ಲ ಎಂಬ ಕಾಮೆಂಟ್ ಗಳು ಅಂತರ್ಜಾಲದಲ್ಲಿ ಹರಿದಾಡುತ್ತಿವೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read