HomeKarnataka'ಗಾಣಿಗ ಸಮುದಾಯ'ದ ಸಮಸ್ಯೆ ಬಗ್ಗೆ ಪ್ರಧಾನಿ ಮೋದಿಗೆ ಪತ್ರ ಬರೆಯುತ್ತೇನೆ : ಸಿಎಂ ಸಿದ್ದರಾಮಯ್ಯ

‘ಗಾಣಿಗ ಸಮುದಾಯ’ದ ಸಮಸ್ಯೆ ಬಗ್ಗೆ ಪ್ರಧಾನಿ ಮೋದಿಗೆ ಪತ್ರ ಬರೆಯುತ್ತೇನೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು :   ‘ಗಾಣಿಗ ಸಮುದಾಯ’ದ ಸಮಸ್ಯೆ ಬಗ್ಗೆ ಪ್ರಧಾನಿ ಮೋದಿಗೆ ಪತ್ರ ಬರೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸಿಎಂ ಸಿದ್ದರಾಮಯ್ಯ ಅವರು ಇಂದು ಅಖಿಲ ಕರ್ನಾಟಕ ಗಾಣಿಗರ ಸಂಘ ಆಯೋಜಿಸಿದ್ದ ಸುವರ್ಣ ಮಹೋತ್ಸವ ಸಮಾರಂಭ ಮತ್ತು ಗಾಣಿಗ ಜನಾಂಗದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಸಮಾಜದಲ್ಲಿ ಅವಕಾಶ ವಂಚಿತ ಜನರಿಗೆ, ಶತಶತಮಾನಗಳಿಂದ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿರುವವರು, ಸಾಮಾಜಿಕ ನ್ಯಾಯದಿಂದ ಇಂದಿಗೂ ವಂಚಿತರಾದ ಜನರ ಪರವಾಗಿ ನಾವು ಇರುತ್ತೇವೆ. ಯಾರೂ ಏನೇ ಹೇಳಿದರೂ ಸಾಮಾಜಿಕ ನ್ಯಾಯದಲ್ಲಿ ರಾಜಿ ಇಲ್ಲದೆ ಕೆಲಸ ಮಾಡುತ್ತೇವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಾಣಿಗ ಸಮಾಜದವರು ಎಣ್ಣೆ ಉತ್ಪಾದನೆಯ ವೃತ್ತಿ ಮಾಡುತ್ತಿದ್ದವರು. ಇತ್ತೀಚಿನ ವರ್ಷಗಳಲ್ಲಿ ಕೈಗಾರೀಕರಣವಾದ ನಂತರ, ಎಣ್ಣೆ ತಯಾರಿಸುವ ವೃತ್ತಿಯನ್ನು ಬಿಡಬೇಕಾದ ಪರಿಸ್ಥಿತಿ ಬಂದಿದೆ. ಅನೇಕರು ಇದರಿಂದ ನಿರುದ್ಯೋಗಿಗಳಾಗಿದ್ದಾರೆ. ಈ ಸಮಾಜದಲ್ಲಿ ಜಮೀನು ಹೊಂದಿದವರು ಬಹಳ ಕಡಿಮೆ, ಸಣ್ಣ ರೈತರು ಬಹಳ ಕಡಿಮೆ ಇದ್ದಾರೆ.

ಗಾಣಿಗರ ನಿಗಮ ಸ್ಥಾಪನೆ, ವಿಶ್ವಕರ್ಮ ಯೋಜನೆಯಡಿ ಗಾಣಿಗರನ್ನು ಬಿಟ್ಟಿದ್ದರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಸಮುದಾಯದ ಮುಖಂಡರು ಈಗ ನನ್ನಲ್ಲಿ ಮನವಿ ಮಾಡಿದ್ದಾರೆ. ನಿಮ್ಮ ಸಮಾಜಕ್ಕೆ ಸೇರಿದ ಪ್ರಧಾನಿಗಳಿಗೆ ನಿಮ್ಮ ಸಮಸ್ಯೆ ಗೊತ್ತಿದೆಯೋ? ಇಲ್ಲವೋ? ನನಗೆ ತಿಳಿದಿಲ್ಲ ಆದರೆ ನಾನು ಕೂಡಲೇ ಪತ್ರ ಬರೆಯುತ್ತೇನೆ.

ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಜಾತಿ ಗಣತಿ ವರದಿಯನ್ನು ವೈಜ್ಞಾನಿಕವಾಗಿ ಸಿದ್ಧ ಮಾಡಿದ್ದು, ವರದಿಯನ್ನು ಇನ್ನೂ ನಾವು ಸ್ವೀಕಾರ ಮಾಡಿಲ್ಲ. ವರದಿಯನ್ನು ಸ್ವೀಕರಿಸಲೆಂದೇ ಆಯೋಗದ ಅವಧಿಯನ್ನು 2 ತಿಂಗಳು ಮುಂದುವರೆಸಲಾಗಿದೆ. ವರದಿ ಬಂದ ಮೇಲೆ ತೀರ್ಮಾನ ಕೈಗೊಳ್ಳಲಾಗುವುದು.

ರಾಜಶೇಖರ್ ಅವರಿಗೆ ಸಹಕಾರ ರತ್ನ ಎಂಬ ಬಿರುದು, ಲಕ್ಷ್ಮೀ ಪತಿ ಎನ್ನುವವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ. ರಾಧಾಕೃಷ್ಣ ಏಂಬುವವರಿಗೆ ರಾಜ್ಯ ರೈತ ಪ್ರಶಸ್ತಿ ನೀಡಿದೆ. ಸಮಾಜಿಕ ಕೆಲಸ ಮಾಡಿದವರನ್ನು ಗುರುತಿಸುವ ಕೆಲಸ ನಮ್ಮ ಸರ್ಕಾರ ಮಾಡಿದೆ. ಹೀಗೆಯೇ ಅದನ್ನು ನಾವು ಮುಂದುವರೆಸುತ್ತೇವೆ.
ವಿ.ಆರ್.ಸುದರ್ಶನ್ ಮತ್ತು ನಾನು ರಾಜಕೀಯ, ಹೋರಾಟ, ಸಾಮಾಜಿಕವಾಗಿ ಒಟ್ಟಿಗೆ ಇದ್ದವರು. ಅವರ ಹಾಗೂ ನಮ್ಮ ಮನಸ್ಥಿತಿ ಒಂದೇ ಇದೆ. ರೂಢಾನಂದಪುರಿ ಅವರು ಸ್ವಾಮೀಜಿಗಳಾದ ಮೇಲೆ ಇದೇ ಮೊದಲ ಬಾರಿಗೆ ವೇದಿಕೆ ಹಂಚಿಕೊಳ್ಳುತ್ತಿದ್ದೇನೆ. ನಾವು ಒಟ್ಟಿಗೆ ಹಿಂದುಳಿದ ಜಾತಿಗಳ ಸಮಸ್ಯೆ ಕುರಿತು ಚರ್ಚೆ ಮಾಡಿ, ಇತ್ಯರ್ಥ ಮಾಡಲು ಪ್ರಯತ್ನಿಸಿದವರು. ಅವರಲ್ಲಿ ಈ ಸಮಾಜವನ್ನು ಮುನ್ನಡೆಸುವ ಶಕ್ತಿ ಹೆಚ್ಚಾಗಲಿ ಎಂದು ಹಾರೈಸುತ್ತೇನೆ ಎಂದರು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular